ಜೆಕರ್ಯ 3:3

ಯೆಹೋಶು ವನು ಮೈಲಿಗೆಯಾದ ವಸ್ತ್ರಗಳನ್ನು ತೊಟ್ಟುಕೊಂಡವ ನಾಗಿ ದೂತನ ಮುಂದೆ ನಿಂತನು.

ಸಂದರ್ಭದೊಂದಿಗೆ ಓದಿ · ಜೆಕರ್ಯ 3

1ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು.

2ಆಗ ಕರ್ತನ ದೂತನು ಸೈತಾನನಿಗೆ--ಸೈತಾನನೇ, ಕರ್ತನು ನಿನ್ನನ್ನು ಗದರಿಸಲಿ; ಹೌದು, ಯೆರೂಸಲೇಮನ್ನು ಆದುಕೊಂಡ ಕರ್ತನು ನಿನ್ನನ್ನು ಗದರಿಸಲಿ; ಅದು ಬೆಂಕಿಯೊಳಗಿಂದ ಎಳೆದ ಕೊಳ್ಳೆಯಾಗಿದೆಯಲ್ಲವೋ ಅಂದನು.

3ಯೆಹೋಶು ವನು ಮೈಲಿಗೆಯಾದ ವಸ್ತ್ರಗಳನ್ನು ತೊಟ್ಟುಕೊಂಡವ ನಾಗಿ ದೂತನ ಮುಂದೆ ನಿಂತನು.

4ಆಗ ಅವನು ಉತ್ತರಕೊಟ್ಟು ತನ್ನ ಮುಂದೆ ನಿಂತವರಿಗೆ--ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದು ಹಾಕಿರಿ ಅಂದನು. ಅವನಿಗೆ--ಇಗೋ, ನಿನ್ನ ಅಕ್ರಮವು ನಿನ್ನನ್ನು ಬಿಟ್ಟುಹೋಗುವಂತೆ ಮಾಡಿದ್ದೇನೆ; ಬದಲು ವಸ್ತ್ರಗಳನ್ನು ನಿನಗೆ ತೊಡಿಸುವೆನು ಅಂದನು.

5ಆಗ ನಾನು--ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಡಿರಿ ಅಂದೆನು. ಆಗ ಅವರು ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಟ್ಟು ಅವನಿಗೆ ನಿಲು ವಂಗಿಗಳನ್ನು ತೊಡಿಸಿದರು; ಕರ್ತನ ದೂತನು ಪಕ್ಕ ದಲ್ಲಿ ನಿಂತಿದ್ದನು.

ಜೆಕರ್ಯ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी