ನ್ಯಾಯಸ್ಥಾಪಕರು 11:34

ಯೆಪ್ತಾಹನು ಮಿಚ್ಪೆಯಲ್ಲಿರುವ ತನ್ನ ಮನೆಗೆ ಬರುವಾಗ ಇಗೋ, ಅವನ ಮಗಳು ದಮ್ಮಡಿಗಳ ಸಂಗಡವೂ ನಾಟ್ಯದ ಸಂಗಡವೂ ಅವನನ್ನು ಎದುರು ಗೊಳ್ಳಲು ಹೊರಟಳು. ಅವನಿಗೆ ಅವಳು ಒಬ್ಬಳೇ ಮಗಳು; ಅವಳ ಹೊರತಾಗಿ ಅವನಿಗೆ ಮಗನಾಗಲಿ ಮಗಳಾಗಲಿ ಇರಲಿಲ್ಲ.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 11

32ಹೀಗೆ ಯೆಪ್ತಾಹನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಅವರೆದುರಿಗೆ ಹೊರಟು ಹೋದನು. ಕರ್ತನು ಅವರನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು.

33ಅವನು ಅವರನ್ನು ಅರೋಯೇರಿ ನಿಂದ ನೀನು ಮಿನ್ನೀತಿಗೆ ಹೋಗುವ ವರೆಗೆ ಇರುವ ಇಪ್ಪತ್ತು ಪಟ್ಟಣಗಳನ್ನು ದ್ರಾಕ್ಷೇ ತೋಟದ ಬೈಲಿನ ವರೆಗೂ ಮಹಾದೊಡ್ಡ ಸಂಹಾರದಿಂದ ಹೊಡೆದನು. ಹೀಗೆ ಅಮ್ಮೋನನ ಮಕ್ಕಳು ಇಸ್ರಾಯೇಲ್‌ ಮಕ್ಕಳ ಮುಂದೆ ತಗ್ಗಿಸಲ್ಪಟ್ಟರು.

34ಯೆಪ್ತಾಹನು ಮಿಚ್ಪೆಯಲ್ಲಿರುವ ತನ್ನ ಮನೆಗೆ ಬರುವಾಗ ಇಗೋ, ಅವನ ಮಗಳು ದಮ್ಮಡಿಗಳ ಸಂಗಡವೂ ನಾಟ್ಯದ ಸಂಗಡವೂ ಅವನನ್ನು ಎದುರು ಗೊಳ್ಳಲು ಹೊರಟಳು. ಅವನಿಗೆ ಅವಳು ಒಬ್ಬಳೇ ಮಗಳು; ಅವಳ ಹೊರತಾಗಿ ಅವನಿಗೆ ಮಗನಾಗಲಿ ಮಗಳಾಗಲಿ ಇರಲಿಲ್ಲ.

35ಅವನು ಅವಳನ್ನು ನೋಡಿ ದಾಗ ತನ್ನ ವಸ್ತ್ರಗಳನ್ನು ಹರಕೊಂಡು--ಅಯ್ಯೋ, ನನ್ನ ಕುಮಾರ್ತೆಯೇ, ನೀನು ನನ್ನನ್ನು ಬಹಳವಾಗಿ ಕುಂದಿಸಿದಿ. ನನ್ನನ್ನು ತೊಂದರೆಪಡಿಸುವವರಲ್ಲಿ ನೀನು ಒಬ್ಬಳಾದಿ. ಯಾಕಂದರೆ ನಾನು ಕರ್ತನಿಗೆ ನನ್ನ ಬಾಯಿ ತೆರೆದು ಪ್ರಮಾಣಮಾಡಿದೆನು; ಹಿಂದೆಗೆಯಲಾರೆನು ಅಂದನು.

36ಅವಳು ಅವನಿಗೆ--ನನ್ನ ತಂದೆಯೇ, ಕರ್ತನು ಅಮ್ಮೋನನ ಮಕ್ಕಳಾದ ನಿನ್ನ ಶತ್ರುಗಳಿಗೆ ನಿನಗೋಸ್ಕರ ಮುಯ್ಯಿ ತೀರಿಸಿದ್ದರಿಂದ ಆತನಿಗೆ ನಿನ್ನ ಬಾಯಿಂದ ಹೊರಟ ಮಾತಿನ ಪ್ರಕಾರವೇ ನನಗೆ ಮಾಡು ಅಂದಳು.

ನ್ಯಾಯಸ್ಥಾಪಕರು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी