ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ. ಅದನ್ನು ಕಾಪಾಡು. ಅದು ನಿನ್ನ ಜೀವವಾಗಿದೆ.
11ಜ್ಞಾನದ ಮಾರ್ಗದಲ್ಲಿ ನಾನು ನಿನಗೆ ಬೋಧಿಸಿದೆನು; ಸರಿಯಾದ ದಾರಿಗಳಲ್ಲಿ ನಾನು ನಿನ್ನನ್ನು ನಡಿಸಿದೆನು.
12ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಇಕ್ಕಟ್ಟಾಗದು; ನೀನು ಓಡುವಾಗ ಮುಗ್ಗರಿಸುವದಿಲ್ಲ.
13ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ. ಅದನ್ನು ಕಾಪಾಡು. ಅದು ನಿನ್ನ ಜೀವವಾಗಿದೆ.
14ದುಷ್ಟರ ದಾರಿಯೊಳಗೆ ಪ್ರವೇಶಿಸದಿರು, ಕೆಟ್ಟವರ ಮಾರ್ಗದಲ್ಲಿ ಹೋಗಬೇಡ.
15ಅದನ್ನು ತಪ್ಪಿಸು, ಅದರ ಪಕ್ಕದಲ್ಲಿ ಹಾದು ಹೋಗ ಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ