೨ ಪೇತ್ರನು 2:12

ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ; ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ

ಸಂದರ್ಭದೊಂದಿಗೆ ಓದಿ · ೨ ಪೇತ್ರನು 2

10ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.

11ದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಗೌರವವುಳ್ಳವರಿಗೆ ವಿರೋಧವಾಗಿ ನಿಂದೆಯನ್ನೂ ದೂಷಣೆಯನ್ನೂ ತರು ವದಿಲ್ಲ.

12ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ; ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ

13ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ.

14ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.

೨ ಪೇತ್ರನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी