೨ ಅರಸುಗಳು 19:33

ಅವನು ಬಂದ ಮಾರ್ಗವಾಗಿಯೇ ತಿರಿಗಿ ಹೋಗುವನು; ಆದರೆ ಅವನು ಈ ಪಟ್ಟಣದಲ್ಲಿ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 19

31ಯೆರೂ ಸಲೇಮಿನಿಂದ ಉಳಿದವರೂ ಚಿಯೋನ್‌ ಪರ್ವತ ದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ಮಾಡುವದು.

32ಆದ ದರಿಂದ ಕರ್ತನು ಅಶ್ಶೂರಿನ ಅರಸನನ್ನು ಕುರಿತು ಹೇಳುವದೇನಂದರೆ--ಅವನು ಈ ಪಟ್ಟಣದಲ್ಲಿ ಬರು ವದಿಲ್ಲ; ಅಲ್ಲಿ ಬಾಣವನ್ನು ಎಸೆಯುವದಿಲ್ಲ; ಗುರಾಣಿ ಹಿಡಿದುಕೊಂಡು ಅದರ ಮುಂದೆ ಸೇರುವದಿಲ್ಲ; ಅದಕ್ಕೆ ವಿರೋಧವಾಗಿ ದಿನ್ನೆಯನ್ನು ಹಾಕುವದಿಲ್ಲ.

33ಅವನು ಬಂದ ಮಾರ್ಗವಾಗಿಯೇ ತಿರಿಗಿ ಹೋಗುವನು; ಆದರೆ ಅವನು ಈ ಪಟ್ಟಣದಲ್ಲಿ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ.

34ನನ್ನ ನಿಮಿತ್ತವೂ ನನ್ನ ಸೇವಕನಾದ ದಾವೀದನ ನಿಮಿತ್ತವೂ ನಾನು ಈ ಪಟ್ಟಣವನ್ನು ಕಾಪಾಡಿ ಅದನ್ನು ರಕ್ಷಿಸುವೆನು ಎಂಬದೇ.

35ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.

೨ ಅರಸುಗಳು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी