೧ ಯೋಹಾನನು 3:3

ಆತನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.

ಸಂದರ್ಭದೊಂದಿಗೆ ಓದಿ · ೧ ಯೋಹಾನನು 3

1ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.

2ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.

3ಆತನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.

4ಪಾಪಮಾಡುವವನು ನ್ಯಾಯಪ್ರಮಾಣವನ್ನು ವಿಾರುವವನಾಗಿದ್ದಾನೆ; ಯಾಕಂದರೆ ನ್ಯಾಯ ಪ್ರಮಾಣವನ್ನು ವಿಾರುವದೇ ಪಾಪ.

5ಪಾಪಗಳನ್ನು ನಿವಾರಣೆ ಮಾಡುವದಕ್ಕಾಗಿ ಆತನು ಪ್ರತ್ಯಕ್ಷನಾದ ನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.

೧ ಯೋಹಾನನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी