ಮಲಾಕಿಯ 1:12

ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ.

ಸಂದರ್ಭದೊಂದಿಗೆ ಓದಿ · ಮಲಾಕಿಯ 1

10ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ.

11ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

12ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ.

13ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.

14ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಮಲಾಕಿಯ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी