ಆಗ ಅವರಿಗೆ ಬಹು ದೂರದಲ್ಲಿ ಬಹಳ ಹಂದಿಗಳ ಗುಂಪು ಮೇಯುತ್ತಿತ್ತು.
28ಆತನು ಆಚೆಯ ದಡದ ಗದರೇನರ ದೇಶಕ್ಕೆ ಬಂದಾಗ ದೆವ್ವಗಳು ಹಿಡಿದಿದ್ದ ಇಬ್ಬರು ಸಮಾಧಿ ಗಳೊಳಗಿಂದ ಆತನ ಎದುರಿಗೆ ಬಂದರು. ಅವರು ಬಹು ಉಗ್ರತೆಯುಳ್ಳವರಾಗಿದ್ದದರಿಂದ ಯಾವ ಮನು ಷ್ಯನೂ ಆ ಮಾರ್ಗವಾಗಿ ಹೋಗುವ ಹಾಗಿದ್ದಿಲ್ಲ.
29ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
30ಆಗ ಅವರಿಗೆ ಬಹು ದೂರದಲ್ಲಿ ಬಹಳ ಹಂದಿಗಳ ಗುಂಪು ಮೇಯುತ್ತಿತ್ತು.
31ಆದದರಿಂದ ದೆವ್ವಗಳು ಆತನಿಗೆ--ನೀನು ನಮ್ಮನ್ನು ಹೊರಗೆ ಹಾಕುವದಾದರೆ ಆ ಹಂದಿಗಳ ಗುಂಪಿನೊಳಗೆ ಸೇರಿಕೊಳ್ಳುವದಕ್ಕೆ ನಮಗೆ ಅಪ್ಪಣೆ ಕೊಡು ಎಂದು ಬೇಡಿಕೊಂಡವು.
32ಆತನು ಅವುಗಳಿಗೆ--ಹೋಗಿರಿ ಅಂದನು. ಆಗ ಅವು ಹೊರಗೆ ಬಂದು ಹಂದಿಗಳ ಗುಂಪಿನೊಳಗೆ ಸೇರಿಕೊಂಡವು; ಆಗ ಇಗೋ, ಹಂದಿಗಳ ಗುಂಪೆಲ್ಲಾ ಸಮುದ್ರದ ಕಡಿದಾದ ಸ್ಥಳಕ್ಕೆ ಉಗ್ರವಾಗಿ ಓಡಿಹೋಗಿ ನೀರಿನಲ್ಲಿ ಬಿದ್ದು ಸತ್ತು ಹೋದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ