ನೀನು ನಿನ್ನ ಸಂಬಳವನ್ನು ನಿರ್ಣಯಿಸು; ಆಗ ಅದನ್ನು ನಾನು ನಿನಗೆ ಕೊಡುವೆನು ಅಂದನು.
26ನಾನು ಯಾರಿಗೊಸ್ಕರ ನಿನಗೆ ಸೇವೆ ಮಾಡಿದೆನೋ ಆ ನನ್ನ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡು. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿದ್ದೀ ಅಂದನು.
27ಲಾಬಾನನು ಅವನಿಗೆ--ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವನಾಗಿದ್ದರೆ ನನ್ನ ಬಳಿ ಯಲ್ಲಿಯೇ ಇರು. ಕರ್ತನು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾನೆಂದು ನಾನು ಅನುಭವದಿಂದ ಕಲಿತುಕೊಂಡಿದ್ದೇನೆ.
28ನೀನು ನಿನ್ನ ಸಂಬಳವನ್ನು ನಿರ್ಣಯಿಸು; ಆಗ ಅದನ್ನು ನಾನು ನಿನಗೆ ಕೊಡುವೆನು ಅಂದನು.
29ಅದಕ್ಕೆ ಯಾಕೋಬನು ಅವನಿಗೆ--ನಾನು ನಿನಗೆ ಮಾಡಿದ ಸೇವೆಯನ್ನೂ ನಿನ್ನ ಮಂದೆಯು ನನ್ನ ಬಳಿಯಲ್ಲಿ ಹೇಗೆ ಇತ್ತೆಂಬದ್ದನ್ನೂ ನೀನು ಬಲ್ಲೆ.
30ನಾನು ಬರುವದಿಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ; ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಕರ್ತನು ನಿನ್ನನ್ನು ಆಶೀರ್ವದಿಸಿದ್ದಾನೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ