ಪೇತ್ರನು ಸೆರೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ದೇವರಿಗೆ ಎಡೆಬಿಡದೆ ಪ್ರಾರ್ಥಿಸುತ್ತಿದ್ದರು.
3ಇದು ಯೆಹೂದ್ಯರಿಗೆ ಮೆಚ್ಚಿಗೆಯಾಗಿರುವದನ್ನು ಅವನು ನೋಡಿದ್ದರಿಂದ ಪೇತ್ರನನ್ನು ಹಿಡಿಯುವದಕ್ಕಾಗಿ ಮುಂಗೊಂಡನು. (ಆಗ ಅವು ಹುಳಿಯಿಲ್ಲದ ರೊಟ್ಟಿಯ ದಿವಸಗಳಾಗಿದ್ದವು).
4ಹೀಗೆ ಪಸ್ಕದ ತರುವಾಯ ಜನರ ಮುಂದೆ ತರಬೇಕೆಂಬ ಉದ್ದೇಶ ದಿಂದ ಅವನನ್ನು ಬಂಧಿಸಿ ಸೆರೆಯಲ್ಲಿ ಹಾಕಿಸಿದನು.ಅವನನ್ನು ಕಾಯುವದಕ್ಕಾಗಿ ನಾಲ್ಕು ಚತುಷ್ಟದ ಸೈನಿಕರಿಗೆ ಒಪ್ಪಿಸಿದನು.
5ಪೇತ್ರನು ಸೆರೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ದೇವರಿಗೆ ಎಡೆಬಿಡದೆ ಪ್ರಾರ್ಥಿಸುತ್ತಿದ್ದರು.
6ಹೆರೋದನು ಪೇತ್ರನನ್ನು ಹೊರಗೆ ತರಬೇಕೆಂದಿದ್ದ ಅದೇ ರಾತ್ರಿಯಲ್ಲಿ ಅವನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟು ಇಬ್ಬರು ಸೈನಿಕರ ಮಧ್ಯದಲ್ಲಿ ನಿದ್ರೆಮಾಡುತ್ತಿದ್ದನು; ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯು ತ್ತಿದ್ದರು.
7ಆಗ ಇಗೋ, ಕರ್ತನ ದೂತನು ಪೇತ್ರನ ಬಳಿಗೆ ಬಂದಾಗ ಅವನಿದ್ದ ಸೆರೆಮನೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ--ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಂದ ಸರಪಣಿಗಳು ಕಳಚಿಬಿದ್ದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ