೨ ಸಮುವೇಲನು 6:15

ಈ ಪ್ರಕಾರ ದಾವೀದನೂ ಇಸ್ರಾಯೇಲ್‌ ಮನೆಯವರೆಲ್ಲರೂ ಕರ್ತನ ಮಂಜೂಷವನ್ನು ಆರ್ಭಟ ದಿಂದಲೂ ತುತೂರಿಯ ಶಬ್ದದಿಂದಲೂ ಬರಮಾಡಿ ದರು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 6

13ಕರ್ತನ ಮಂಜೂಷ ವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ ಅವನು ಎತ್ತುಗಳನ್ನೂ ಕೊಬ್ಬಿದ ಪಶು ಗಳನ್ನೂ ಬಲಿಯಾಗಿ ಕೊಟ್ಟನು.

14ಇದಲ್ಲದೆ ದಾವೀ ದನು ನಾರಿನ ಎಫೋದನ್ನು ಧರಿಸಿಕೊಂಡು ತನ್ನ ಪೂರ್ಣ ಬಲದಿಂದ ಕರ್ತನ ಮುಂದೆ ನಾಟ್ಯವಾ ಡಿದನು.

15ಈ ಪ್ರಕಾರ ದಾವೀದನೂ ಇಸ್ರಾಯೇಲ್‌ ಮನೆಯವರೆಲ್ಲರೂ ಕರ್ತನ ಮಂಜೂಷವನ್ನು ಆರ್ಭಟ ದಿಂದಲೂ ತುತೂರಿಯ ಶಬ್ದದಿಂದಲೂ ಬರಮಾಡಿ ದರು.

16ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು.

17ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು.

೨ ಸಮುವೇಲನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी