ಯೆಹೆಜ್ಕೇಲನು 22:16

ಆಗ ನೀನು ಅನ್ಯಜನಾಂಗಗಳ ಮುಂದೆ ನೀನು ನಿನ್ನ ಬಾಧ್ಯತೆಯನ್ನು ತಕ್ಕೊಳ್ಳುವಿ; ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 22

14ನಾನು ನಿನ್ನೊಳಗೆ ಕೆಲಸ ನಡೆಸುವ ದಿವಸಗಳಲ್ಲಿ ನಿನ್ನ ಹೃದಯವು ನಿಲ್ಲುವದೋ? ನಿನ್ನ ಕೈಗಳು ಬಲವಾಗಿರುವವೋ? ಕರ್ತನಾದ ನಾನೇ ಹೇಳಿದ್ದೇನೆ, ನಾನೇ ಅದನ್ನು ಮಾಡುತ್ತೇನೆ.

15ನಿನ್ನನ್ನು ಅನ್ಯ ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು; ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು.

16ಆಗ ನೀನು ಅನ್ಯಜನಾಂಗಗಳ ಮುಂದೆ ನೀನು ನಿನ್ನ ಬಾಧ್ಯತೆಯನ್ನು ತಕ್ಕೊಳ್ಳುವಿ; ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.

17ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇ ನಂದರೆ --

18ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು ನನಗೆ (ಮಂಡೂರ) ಕಿಟ್ಟದ ಹಾಗಾದರು ಅವರೆಲ್ಲರೂ ಬಲೆಯ ಮಧ್ಯದಲ್ಲಿರುವ ಹಿತ್ತಾಳೆ, ತವರ, ಕಬ್ಬಿಣದ, ಹಾಗೆ ಇದ್ದಾರೆ. ಸೀಸದ ಮತ್ತು ಬೆಳ್ಳಿಯ ಕಿಟ್ಟಗಳ ಹಾಗೆಯೂ ಇದ್ದಾರೆ.

ಯೆಹೆಜ್ಕೇಲನು 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी