ನ್ಯಾಯಸ್ಥಾಪಕರು 2:3

ಆದದರಿಂದ--ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು; ಅವರ ದೇವರುಗಳು ನಿಮಗೆ ಉರುಲಾಗುವವೆಂದು ನಾನು ಹೇಳಿದ್ದೆನು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 2

1ಕರ್ತನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು--ನಾನು ನಿಮ್ಮನ್ನು ಐಗುಪ್ತ ದಿಂದ ಬರಮಾಡಿ ನಿಮ್ಮ ತಂದೆಗಳಿಗೆ ಆಣೆಯಿಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು.

2ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ ಅವರ ಬಲಿಪೀಠಗಳನ್ನು ಕೆಡವಿ ಬಿಡಿರಿ ಎಂದು ಹೇಳಿದೆನು. ಆದರೆ ನೀವು ನನ್ನ ಮಾತಿಗೆ ವಿಧೇಯರಾಗಲಿಲ್ಲ; ಹೀಗೆ ಯಾಕೆ ಮಾಡಿ ದಿರಿ?

3ಆದದರಿಂದ--ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು; ಅವರ ದೇವರುಗಳು ನಿಮಗೆ ಉರುಲಾಗುವವೆಂದು ನಾನು ಹೇಳಿದ್ದೆನು.

4ಕರ್ತನ ದೂತನು ಈ ಮಾತುಗಳನ್ನು ಇಸ್ರಾಯೇಲ್‌ ಮಕ್ಕಳೆಲ್ಲರಿಗೆ ಹೇಳುವಾಗ ಜನರು ತಮ್ಮ ಸ್ವರವೆತ್ತಿ ಅತ್ತರು.

5ಆ ಸ್ಥಳಕ್ಕೆ ಬೋಕೀಮ್‌ ಎಂಬ ಹೆಸರಿಟ್ಟು ಅಲ್ಲಿ ಕರ್ತನಿಗೆ ಬಲಿಯನ್ನು ಅರ್ಪಿಸಿದರು.

ನ್ಯಾಯಸ್ಥಾಪಕರು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी