ಎಜ್ರನು 7:24

ಇದಲ್ಲದೆ ಯಾಜಕರೂ ಲೇವಿ ಯರೂ ಹಾಡುಗಾರರೂ ದ್ವಾರಪಾಲಕರೂ ನೆತಿನಿ ಯರೂ ಮೊದಲಾದ ದೇವರ ಆಲಯದ ಸೇವಕರನ್ನು ಕುರಿತು ಏನಂದರೆ--ಅವರ ಮೇಲೆ ತೆರಿಗೆಯನ್ನಾದರೂ ಕಪ್ಪವನ್ನಾದರೂ ಸುಂಕವನ್ನಾದರೂ ಹೊರಿಸಲು ಅಪ್ಪಣೆ ಇಲ್ಲವೆಂದು ನಿಮಗೆ ತಿಳಿಸುತ್ತೇನೆ.

ಸಂದರ್ಭದೊಂದಿಗೆ ಓದಿ · ಎಜ್ರನು 7

22ಪರಲೋಕದ ದೇವರ ನ್ಯಾಯಪ್ರಮಾಣದ ಶಾಸ್ತ್ರಿಯಾಗಿರುವ ಯಾಜ ಕನಾದ ಎಜ್ರನು ನಿಮ್ಮಿಂದ ಏನಾದರೂ ಕೇಳಿದರೆ ಬೆಳ್ಳಿಯು ನೂರು ತಲಾಂತಿನ ಮಟ್ಟಿಗೂ ಗೋಧಿಯು ನೂರು ಕೊಳಗದ ಮಟ್ಟಿಗೂ ದ್ರಾಕ್ಷಾರಸವು ನೂರು ಬುದ್ದಲಿಯ ವರೆಗೂ ಎಣ್ಣೆಯು ನೂರು ಬುದ್ದಲಿಯ ವರೆಗೂ ಉಪ್ಪು ಬೇಕಾದಷ್ಟು ತ್ವರೆಯಾಗಿ ಕೊಡಲ್ಪಡಲಿ.

23ಪರಲೋಕದ ದೇವರಿಂದ ಏನಾದರೂ ಆಜ್ಞಾಪಿಸ ಲ್ಪಟ್ಟರೆ ಅದು ಪರಲೋಕದ ದೇವರ ಆಲಯಕ್ಕೋಸ್ಕರ ಜಾಗ್ರತೆಯಾಗಿ ಮಾಡಲ್ಪಡಲಿ. ಯಾಕಂದರೆ ಅರಸನೂ ಅವನ ಕುಮಾರರೂ ಆಳುವ ರಾಜ್ಯದ ಮೇಲೆ ರೌದ್ರ ಯಾಕೆ ಇರಬೇಕು?

24ಇದಲ್ಲದೆ ಯಾಜಕರೂ ಲೇವಿ ಯರೂ ಹಾಡುಗಾರರೂ ದ್ವಾರಪಾಲಕರೂ ನೆತಿನಿ ಯರೂ ಮೊದಲಾದ ದೇವರ ಆಲಯದ ಸೇವಕರನ್ನು ಕುರಿತು ಏನಂದರೆ--ಅವರ ಮೇಲೆ ತೆರಿಗೆಯನ್ನಾದರೂ ಕಪ್ಪವನ್ನಾದರೂ ಸುಂಕವನ್ನಾದರೂ ಹೊರಿಸಲು ಅಪ್ಪಣೆ ಇಲ್ಲವೆಂದು ನಿಮಗೆ ತಿಳಿಸುತ್ತೇನೆ.

25ಆದರೆ ಎಜ್ರನೇ, ನೀನು ನಿನ್ನ ದೇವರ ನ್ಯಾಯ ಪ್ರಮಾಣಗಳನ್ನು ತಿಳಿದಿರುವದರಿಂದ ನದಿಯ ಆಚೆಯ ಲ್ಲಿರುವ ಸಮಸ್ತ ಜನರಿಗೆ ನ್ಯಾಯತೀರಿಸುವ ಹಾಗೆಯೂ ಅವುಗಳನ್ನು ಅರಿಯದವರಿಗೆ ಬೋಧಿಸುವ ಹಾಗೆಯೂ ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನದ ಪ್ರಕಾರ ಯಜಮಾನರನ್ನೂ ನ್ಯಾಯಾಧಿಪತಿಗಳನ್ನೂ ನೇಮಿಸು.

26ಇದಲ್ಲದೆ ಯಾವನಾದರೂ ನಿನ್ನ ದೇವರ ಕಟ್ಟಳೆ ಯನ್ನೂ ಅರಸನ ಕಟ್ಟಳೆಯನ್ನೂ ಕೈಕೊಳ್ಳದಿದ್ದರೆ ಮರಣಕ್ಕಾದರೂ ಗಡೀಪಾರಿಗಾದರೂ ಆಸ್ತಿ ಹಿಡಿಯು ವದಕ್ಕಾದರೂ ಸೆರೆಗಾದರೂ ಅವನಿಗೆ ಬೇಗ ನ್ಯಾಯ ತೀರಿಸಲ್ಪಡಲಿ ಅಂದನು.

ಎಜ್ರನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी