ಕ್ರಿಸ್ತ ಯೇಸುವಿನಲ್ಲಿ ನನ್ನ ಸಹಾಯಕರಾದ ಪ್ರಿಸ್ಕಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.
1ನಾನು ನಿಮಗೆ ಒಪ್ಪಿಸುವ ನಮ್ಮ ಸಹೋದರಿಯಾದ ಫೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಕ್ರೆಯ ಲ್ಲಿರುವ ಸಭೆಯ ಸೇವಕಳಾಗಿದ್ದಾಳೆ.
2ನೀವು ಆಕೆಯನ್ನು ಪರಿಶುದ್ಧರಿಗೆ ತಕ್ಕಂತೆ ಕರ್ತನಲ್ಲಿ ಅಂಗೀಕರಿಸಿ ಆಕೆಯ ಕೆಲಸದಲ್ಲಿ ಆಕೆಗೆ ಅವಶ್ಯವಾದ ಸಹಾಯವನ್ನು ಮಾಡಿರಿ; ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳಾಗಿದ್ದಾಳೆ.
3ಕ್ರಿಸ್ತ ಯೇಸುವಿನಲ್ಲಿ ನನ್ನ ಸಹಾಯಕರಾದ ಪ್ರಿಸ್ಕಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.
4ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ.
5ಅದರಂತೆಯೇ ಅವರ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ; ಅಖಾಯದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೂ ವಂದನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ