ಯೆಹೆಜ್ಕೇಲನು 38:17

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಯಾವನ ವಿಷಯವಾಗಿ ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳಿಂದ ಪೂರ್ವಕಾಲದಲ್ಲಿ ಮಾತನಾಡಿದೆನೋ ಅವನು ನೀನೇ ಅಲ್ಲವೇ? ನಿನ್ನನ್ನು ಅವರಿಗೆ ವಿರೋಧವಾಗಿ ಬರ ಮಾಡುತ್ತೇನೆಂದು ಆ ದಿನಗಳಲ್ಲಿ ಅನೇಕ ವರ್ಷಗ ಳಿಗೆ ಮುಂಚೆ ಪ್ರವಾದಿಸಿದರಲ್ಲವೇ?

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 38

15ನೀನು ಉತ್ತರ ಭಾಗಗಳ ನಿನ್ನ ಸ್ಥಳದಿಂದ ಬರುವಿ; ನೀನೂ ನಿನ್ನ ಸಂಗಡ ಅನೇಕ ಜನರೂ ಕುದುರೆಗಳನ್ನು ಹತ್ತಿದ ವರಾಗಿ ಬಲವಾದ ಸೈನ್ಯವಾಗಿಯೂ ಮಹಾದಂಡಾ ಗಿಯೂ ಬರುವಿರಿ.

16ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.

17ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಯಾವನ ವಿಷಯವಾಗಿ ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳಿಂದ ಪೂರ್ವಕಾಲದಲ್ಲಿ ಮಾತನಾಡಿದೆನೋ ಅವನು ನೀನೇ ಅಲ್ಲವೇ? ನಿನ್ನನ್ನು ಅವರಿಗೆ ವಿರೋಧವಾಗಿ ಬರ ಮಾಡುತ್ತೇನೆಂದು ಆ ದಿನಗಳಲ್ಲಿ ಅನೇಕ ವರ್ಷಗ ಳಿಗೆ ಮುಂಚೆ ಪ್ರವಾದಿಸಿದರಲ್ಲವೇ?

18ಆ ದಿನದಲ್ಲಿ ಗೋಗನು ಇಸ್ರಾಯೇಲ್‌ ದೇಶಕ್ಕೆ ವಿರೋಧವಾಗಿ ಬರುವಾಗ ರೋಷವು ನನ್ನ ಮುಖದ ಮೇಲೆ ಬರುವದೆಂದು ದೇವರಾದ ಕರ್ತನು ಹೇಳುತ್ತಾನೆ.

19ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನ ಇಸ್ರಾಯೇಲ್‌ ದೇಶದಲ್ಲಿ ಮಹಾಕಂಪನ ಉಂಟಾಗು ವದು;

ಯೆಹೆಜ್ಕೇಲನು 38 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी