ಅವರು ಈ ಮಾತುಗಳನ್ನು ಕೇಳಿ ರೌದ್ರವುಳ್ಳವರಾಗಿ-- ಎಫೆಸದವರ ಡಯಾನಿಯು ದೊಡ್ಡವಳು ಎಂದು ಕೂಗುತ್ತಾ ಹೇಳಿದರು.
26ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
27ಇದರಿಂದ ನಮ್ಮ ಈ ಉದ್ಯೋಗಕ್ಕೆ ಅಪಾಯ ಬರುವ ಹಾಗಿರುವದಲ್ಲದೆ ಡಯಾನಿ ಮಹಾದೇವಿಯ ಗುಡಿಯು ಗಣನೆಗೆ ಬಾರದೆ ಹೋಗುವ ಹಾಗೆ ಎಲ್ಲಾ ಆಸ್ಯಸೀಮೆ ಮತ್ತು ಲೊಕವು ಪೂಜಿಸುವ ಈಕೆಯ ವೈಭವವು ನಾಶವಾಗ ತಕ್ಕದೆಂದು ಹೇಳಿದನು.
28ಅವರು ಈ ಮಾತುಗಳನ್ನು ಕೇಳಿ ರೌದ್ರವುಳ್ಳವರಾಗಿ-- ಎಫೆಸದವರ ಡಯಾನಿಯು ದೊಡ್ಡವಳು ಎಂದು ಕೂಗುತ್ತಾ ಹೇಳಿದರು.
29ಆಗ ಊರೆಲ್ಲಾ ಗಲಿಬಿಲಿಯಾಯಿತು; ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನು ಅರಿಸ್ತಾರ್ಕನನ್ನು ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
30ಪೌಲನು ಜನರೊಳಗೆ ಹೋಗ ಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ