ಲೂಕನು 7:18

ಯೋಹಾನನ ಶಿಷ್ಯರು ಈ ಎಲ್ಲಾ ವಿಷಯಗಳನ್ನು ಅವನಿಗೆ ತಿಳಿಯಪಡಿಸಿದರು.

ಸಂದರ್ಭದೊಂದಿಗೆ ಓದಿ · ಲೂಕನು 7

16ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.

17ಆತನ ವಿಷಯವಾದ ಈ ಸುದ್ದಿಯು ಎಲ್ಲಾ ಯೂದಾಯಕ್ಕೂ ಸುತ್ತಲಿರುವ ಎಲ್ಲಾ ಪ್ರಾಂತ್ಯಕ್ಕೂ ಹೊರಟು ಹೋಯಿತು.

18ಯೋಹಾನನ ಶಿಷ್ಯರು ಈ ಎಲ್ಲಾ ವಿಷಯಗಳನ್ನು ಅವನಿಗೆ ತಿಳಿಯಪಡಿಸಿದರು.

19ಆಗ ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಯೇಸುವಿನ ಬಳಿಗೆ ಕಳುಹಿಸಿ--ಬರಬೇಕಾದವನು ನೀನೋ? ಇಲ್ಲವೆ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ ಎಂದು ಕೇಳಿರಿ ಅಂದನು.

20ಅವರು ಆತನ ಬಳಿಗೆ ಬಂದಾಗ ಆತನಿಗೆ--ಬರಬೇಕಾದವನು ನೀನೋ? ಇಲ್ಲವೆ ನಾವು ಬೇರೊಬ್ಬನಿಗಾಗಿ ಎದುರು ನೋಡ ಬೇಕೋ? ಎಂದು ಕೇಳುವದಕ್ಕಾಗಿ ಬಾಪ್ತಿಸ್ಮ ಮಾಡಿಸುವ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದರು.

ಲೂಕನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी