ಯಾಜಕಕಾಂಡ 23:30

ಆ ದಿವಸ ದಲ್ಲಿ ಯಾವನಾದರೂ ಯಾವದೇ ಕೆಲಸವನ್ನು ಮಾಡಿ ದರೆ ಅವನನ್ನು ನಾನು ಅವನ ಜನರ ಮಧ್ಯದಿಂದ ನಾಶಮಾಡುವೆನು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 23

28ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಕರ್ತನ ಸನ್ನಿಧಿಯಲ್ಲಿ ಪ್ರಾಯ ಶ್ಚಿತ್ತಮಾಡುವದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿ ರುವದು.

29ಆ ದಿವಸದಲ್ಲಿ ಯಾವನಾದರೂ ಕುಂದಿಸಿಕೊಳ್ಳದಿದ್ದರೆ ಅವನು ತನ್ನ ಜನರ ಮಧ್ಯ ದೊಳಗಿನಿಂದ ತೆಗೆದುಹಾಕಲ್ಪಡಬೇಕು.

30ಆ ದಿವಸ ದಲ್ಲಿ ಯಾವನಾದರೂ ಯಾವದೇ ಕೆಲಸವನ್ನು ಮಾಡಿ ದರೆ ಅವನನ್ನು ನಾನು ಅವನ ಜನರ ಮಧ್ಯದಿಂದ ನಾಶಮಾಡುವೆನು.

31ನೀವು ಯಾವ ತರದ ಕೆಲಸ ವನ್ನು ಮಾಡಬಾರದು; ಇದು ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರ ಬೇಕು.

32ಇದು ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿ ರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಬೇಕು; ಆ ತಿಂಗಳಿನ ಒಂಭತ್ತನೆಯ ದಿವಸದ ಸಾಯಂಕಾಲ ದಿಂದ ಮರುದಿನದ ಸಾಯಂಕಾಲದ ವರೆಗೆ ನಿಮ್ಮ ಸಬ್ಬತ್ತನ್ನು ನೀವು ಆಚರಿಸಬೇಕು ಎಂಬದೇ.

ಯಾಜಕಕಾಂಡ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी