ಧರ್ಮೋಪದೇಶಕಾಂಡ 24:2

ಅವಳು ಅವನ ಮನೆಯನ್ನು ಬಿಟ್ಟು ಹೋದ ಮೇಲೆ ಮತ್ತೊಬ್ಬನಿಗೆ ಹೆಂಡತಿಯಾಗ ಬಹುದು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 24

1ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳಿಗೆ ಗಂಡನಾದ ಮೇಲೆ ಅವಳಲ್ಲಿ ಅಶುದ್ಧ ವಾದದ್ದನ್ನು ನೋಡುವದರಿಂದ ಅವಳಿಗೆ ಅವನಿಂದ ಕಟಾಕ್ಷವಾಗದಿದ್ದರೆ ಅವಳಿಗೆ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಡಬೇಕು.

2ಅವಳು ಅವನ ಮನೆಯನ್ನು ಬಿಟ್ಟು ಹೋದ ಮೇಲೆ ಮತ್ತೊಬ್ಬನಿಗೆ ಹೆಂಡತಿಯಾಗ ಬಹುದು.

3ಆ ಮತ್ತೊಬ್ಬ ಗಂಡನು ಅವಳನ್ನು ಹಗೆ ಮಾಡಿ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ತನ್ನ ಮನೆಯಿಂದ ಕಳುಹಿಸಿಬಿಟ್ಟರೆ ಇಲ್ಲವೆ ಅವಳನ್ನು ಹೆಂಡತಿಯಾಗಿ ತಕ್ಕೊಂಡ ಆ ಮತ್ತೊಬ್ಬ ಗಂಡನು ಸತ್ತರೆ

4ಅವಳನ್ನು ಕಳುಹಿಸಿಬಿಟ್ಟ ಮೊದಲನೇ ಗಂಡನು ಅವಳು ಅಶುದ್ಧವಾದ ಮೇಲೆ ಅವಳನ್ನು ತಿರಿಗಿ ತನ್ನ ಹೆಂಡತಿಯಾಗಿ ತಕ್ಕೊಳ್ಳಬಾರದು; ಅದು ಕರ್ತನ ಮುಂದೆ ಅಸಹ್ಯವೇ. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇಲೆ ಪಾಪವನ್ನು ತರಬಾರದು.

ಧರ್ಮೋಪದೇಶಕಾಂಡ 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी