ಯೆಹೆಜ್ಕೇಲನು 35:12

ಆಗ ನಾನೇ ಕರ್ತನೆಂದು ನೀನು ತಿಳಿಯುವಿ ಮತ್ತು ಇಸ್ರಾಯೇಲಿನ ಪರ್ವತಗಳ ವಿಷಯವಾಗಿ--ಅವು ಹಾಳಾಗಿವೆ ನಮಗೆ ಆಹಾರವಾಗಿ ಕೊಡಲ್ಪಟ್ಟಿವೆ ಎಂದು ಹೇಳಿ ಮಾತ ನಾಡಿದ ನಿನ್ನ ಎಲ್ಲಾ ದೂಷಣೆಗಳನ್ನು ಕೇಳಿರುವೆನೆಂದು ತಿಳಿಯುವಿ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 35

10ಕರ್ತನು ಅವುಗಳಲ್ಲಿರುವದರಿಂದ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನವಾಗು ವವು. ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ.

11ಆದದರಿಂದ ದೇವರಾದ ಕರ್ತನು ಹೇಳುತ್ತಾನೆ--ನನ್ನ ಜೀವದಾಣೆ, ನಾನು ನಿನ್ನ ಕೋಪದ ಪ್ರಕಾರವೂ ನೀನು ದ್ವೇಷದಿಂದ ಅವರಿಗೆ ವಿರುದ್ಧವಾಗಿ ನಡೆಸಿದ ಹೊಟ್ಟೇಕಿಚ್ಚಿನ ಪ್ರಕಾರವೂ ನಿನಗೆ ನ್ಯಾಯತೀರಿಸಿದ ಮೇಲೆ ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ.

12ಆಗ ನಾನೇ ಕರ್ತನೆಂದು ನೀನು ತಿಳಿಯುವಿ ಮತ್ತು ಇಸ್ರಾಯೇಲಿನ ಪರ್ವತಗಳ ವಿಷಯವಾಗಿ--ಅವು ಹಾಳಾಗಿವೆ ನಮಗೆ ಆಹಾರವಾಗಿ ಕೊಡಲ್ಪಟ್ಟಿವೆ ಎಂದು ಹೇಳಿ ಮಾತ ನಾಡಿದ ನಿನ್ನ ಎಲ್ಲಾ ದೂಷಣೆಗಳನ್ನು ಕೇಳಿರುವೆನೆಂದು ತಿಳಿಯುವಿ.

13ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ಕೊಚ್ಚಿದ್ದನ್ನೂ ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ.

14ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾವಾಗ ಸಂಪೂರ್ಣ ಭೂಮಿಯು ಸಂತೋಷಪಡು ತ್ತದೋ ಆಗ ನಾನು ನಿನ್ನನ್ನು ಹಾಳುಮಾಡುವೆನು.

ಯೆಹೆಜ್ಕೇಲನು 35 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी