೧ ಅರಸುಗಳು 12:7

ಅವರು ಅವನಿಗೆ--ನೀನು ಇಂದು ಈ ಜನರಿಗೆ ಸೇವಕನಾಗಿ ಅವರನ್ನು ಸೇವಿಸಿ ಒಳ್ಳೇ ಮಾತುಗಳಿಂದ ಅವರಿಗೆ ಪ್ರತ್ಯುತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು ಎಂದು ಹೇಳಿದರು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 12

5ಅವನು ಅವರಿಗೆ--ನೀವು ಹೋಗಿ ಮೂರು ದಿವಸಗಳ ತರುವಾಯ ತಿರಿಗಿ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದ್ದರಿಂದ ಅವರು ಹೋದರು.

6ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆ ಕೇಳಲು--ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ಏನು ಆಲೋಚನೆ ಹೇಳುತ್ತೀರಿ ಅಂದನು.

7ಅವರು ಅವನಿಗೆ--ನೀನು ಇಂದು ಈ ಜನರಿಗೆ ಸೇವಕನಾಗಿ ಅವರನ್ನು ಸೇವಿಸಿ ಒಳ್ಳೇ ಮಾತುಗಳಿಂದ ಅವರಿಗೆ ಪ್ರತ್ಯುತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು ಎಂದು ಹೇಳಿದರು.

8ಆದರೆ ಅವನು ತನಗೆ ಹಿರಿಯರು ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋ ಚನೆಯನ್ನು ಕೇಳಿದನು.

9ಅವನು ಅವರಿಗೆ--ನಿನ್ನ ತಂದೆ ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರ ಕೊಡಲು ಏನು ಯೋಚನೆ ಹೇಳುತ್ತೀರಿ ಅಂದನು.

೧ ಅರಸುಗಳು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी