ಮಾರ್ಕನು 2:24

ಅದಕ್ಕೆ ಫರಿಸಾಯರು ಆತನಿಗೆ--ಇಗೋ, ಅವರು ಸಬ್ಬತ್‌ ದಿನದಲ್ಲಿ ಮಾಡಬಾರದ್ದನ್ನು ಯಾಕೆ ಮಾಡು ತ್ತಾರೆ ಎಂದು ಕೇಳಿದರು.

ಸಂದರ್ಭದೊಂದಿಗೆ ಓದಿ · ಮಾರ್ಕನು 2

22ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕುವದಿಲ್ಲ; ಹಾಕಿದರೆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಹಾಕುವದರಿಂದ ದ್ರಾಕ್ಷಾರಸವು ಚೆಲ್ಲಿಹೋಗುವದು ಮತ್ತು ಬುದ್ದಲಿಗಳು ಕೆಟ್ಟುಹೋಗು ವವು. ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿಯೇ ಹಾಕಿಡತಕ್ಕದ

23ಇದಾದ ಮೇಲೆ ಆತನು ಸಬ್ಬತ್‌ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಕಾಳಿನ ತೆನೆಗಳನ್ನು ಕೀಳಲಾರಂಭಿಸಿದರು.

24ಅದಕ್ಕೆ ಫರಿಸಾಯರು ಆತನಿಗೆ--ಇಗೋ, ಅವರು ಸಬ್ಬತ್‌ ದಿನದಲ್ಲಿ ಮಾಡಬಾರದ್ದನ್ನು ಯಾಕೆ ಮಾಡು ತ್ತಾರೆ ಎಂದು ಕೇಳಿದರು.

25ಆತನು ಅವರಿಗೆ--ದಾವೀದನು ಕೊರತೆಯುಳ್ಳವನಾಗಿ ಹಸಿದಾಗ ಅವನೂ ಅವನ ಸಂಗಡ ಇದ್ದವರೂ ಏನು ಮಾಡಿ ದರು?

26ಮಹಾಯಾಜಕನಾದ ಅಬಿಯಾತರನ ದಿವಸಗಳಲ್ಲಿ ಅವನು ದೇವರ ಮನೆಯೊಳಕ್ಕೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖದ ರೊಟ್ಟಿಯನ್ನು ಹೇಗೆ ತಿಂದು ತನ್ನ ಜೊತೆಯಲ್ಲಿ ಇದ್ದವರಿಗೂ ಕೊಟ್ಟನೆಂಬದನ್ನು ನೀವು ಎಂದಾದರೂ ಓದಲಿಲ್ಲವೋ ಎಂದು ಹೇಳಿ ದನು.

ಮಾರ್ಕನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी