ವಿಮೋಚನಕಾಂಡ 30:7

ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 30

5ಆ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು.

6ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು.

7ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು.

8ಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು.

9ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ ದಹನಬಲಿಗಳನ್ನಾಗಲಿ ಆಹಾರಾರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು.

ವಿಮೋಚನಕಾಂಡ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी