ಲೂಕನು 9:12

ಸಂಜೆಯಾಗು ತ್ತಿದ್ದಾಗ ಹನ್ನೆರಡು ಮಂದಿ ಬಂದು ಆತನಿಗೆ--ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಇಳುಕೊಂಡು ಆಹಾರವನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡು; ಯಾಕಂದರೆ ನಾವು ಇಲ್ಲಿ ಅರಣ್ಯ ಸ್ಥಳದಲ್ಲಿ ಇದ್ದೇವಲ್ಲಾ ಅಂದರು.

ಸಂದರ್ಭದೊಂದಿಗೆ ಓದಿ · ಲೂಕನು 9

10ತರುವಾಯ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದವುಗಳನ್ನೆಲ್ಲಾ ಆತನಿಗೆ ತಿಳಿಸಿದರು. ಆಗ ಆತನು ಬೇತ್ಸಾಯಿದ ಎಂದು ಕರೆಯಲ್ಪಟ್ಟ ಪಟ್ಟಣಕ್ಕೆ ಸಂಬಂಧಿಸಿದ ಅರಣ್ಯಸ್ಥಳಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದನು.

11ಆಗ ಜನರು ಅದನ್ನು ತಿಳಿದು ಆತನನ್ನು ಹಿಂಬಾಲಿಸಲು ಆತನು ಅವರನ್ನು ಅಂಗೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥ ಮಾಡಿದನು.

12ಸಂಜೆಯಾಗು ತ್ತಿದ್ದಾಗ ಹನ್ನೆರಡು ಮಂದಿ ಬಂದು ಆತನಿಗೆ--ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಇಳುಕೊಂಡು ಆಹಾರವನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡು; ಯಾಕಂದರೆ ನಾವು ಇಲ್ಲಿ ಅರಣ್ಯ ಸ್ಥಳದಲ್ಲಿ ಇದ್ದೇವಲ್ಲಾ ಅಂದರು.

13ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು.

14ಯಾಕಂದರೆ ಅವರು ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಇದ್ದರು. ಆಗ ಆತನು ತನ್ನ ಶಿಷ್ಯ ರಿಗೆ--ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂಡ್ರಿಸಿರಿ ಅಂದನು.

ಲೂಕನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी