ಆಗ ಮನೆಯ ವಿಚಾರಕನಾದ ಹಿಲ್ಕೀಯನ ಮಗನಾದ ಎಲ್ಯಾಕೀ ಮನು, ಲೇಖಕನಾದ ಶೆಬ್ನ, ದಾಖಲೆಗಾರನಾದ ಆಸಾ ಫನ ಮಗನಾಗಿದ್ದ ಯೋವ ಎಂಬವರು ಬಂದರು.
1ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರದ ಅರಸ ನಾದ ಸನ್ಹೇರೀಬನು ಬಂದು ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
2ಆಗ ಅಶ್ಶೂರದ ಅರಸನು ಲಾಕೀಷಿನಿಂದ ದೊಡ್ಡ ಸೈನ್ಯದ ಸಂಗಡ ರಬ್ಷಾಕನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವನು ಮೇಲಿನ ಕೆರೆಯ ಕಾಲುವೆಯ ಸವಿಾಪದಲ್ಲಿ ಅಗಸರ ಹೊಲದ ರಾಜಮಾರ್ಗದಲ್ಲಿ ನಿಂತುಕೊಂಡನು.
3ಆಗ ಮನೆಯ ವಿಚಾರಕನಾದ ಹಿಲ್ಕೀಯನ ಮಗನಾದ ಎಲ್ಯಾಕೀ ಮನು, ಲೇಖಕನಾದ ಶೆಬ್ನ, ದಾಖಲೆಗಾರನಾದ ಆಸಾ ಫನ ಮಗನಾಗಿದ್ದ ಯೋವ ಎಂಬವರು ಬಂದರು.
4ರಬ್ಷಾಕನು ಅವರಿಗೆ--ನೀವು ಅಶ್ಶೂರಿನ ಅರಸನಾದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿ ಸಿರಿ--ಈ ನಿನ್ನ ಭರವಸಕ್ಕೆ ಯಾವ ಆಧಾರವುಂಟು?
5ಯುದ್ಧಕ್ಕೆ ಬೇಕಾದ ಆಲೋಚನೆಯೂ ಪರಾಕ್ರಮವೂ ನನಗೆ ಉಂಟೆಂದು ಹೇಳುವ ನಿನ್ನ ಮಾತು ಬರೀ ವ್ಯರ್ಥವಾದ ಮಾತುಗಳೇ, ನೀನು ಯಾರನ್ನು ನಂಬಿ ಕೊಂಡು ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಿ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ