೨ ಸಮುವೇಲನು 4:5

ಬೇರೋತಿನ ಮಗನಾಗಿರುವ ರಿಮ್ಮೋನನ ಮಕ್ಕ ಳಾದ ರೇಕಾಬನೂ ಬಾಣನೂ ಹೊರಟು ಮಧ್ಯಾಹ್ನದ ಬಿಸಿಲಿನಲ್ಲಿ ಮಂಚದ ಮೇಲೆ ಮಲಗಿಕೊಂಡಿರುವ ಈಷ್ಬೋಶೆತನ ಮನೆಗೆ ಬಂದರು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 4

3ಬೇರೋತ್‌ ಬೆನ್ಯಾವಿಾನನ ಪಾಲಿನಲ್ಲಿ ಲೆಖ್ಖಿಸಲ್ಪಟ್ಟಿತ್ತು. ಆದರೆ ಬೇರೋತ್ಯರು ಗಿತ್ತಾಯಿಮಿಗೆ ಓಡಿಹೋಗಿ ಇಂದಿನ ವರೆಗೂ ಅಲ್ಲಿ ಪ್ರವಾಸಿಗಳಾಗಿದ್ದಾರೆ.

4ಆದರೆ ಸೌಲನ ಮಗನಾದ ಯೋನಾತಾನನಿಗೆ ಕಾಲು ಕುಂಟಾದ ಒಬ್ಬ ಮಗನಿದ್ದನು. ಇಜ್ರೇಲಿನಿಂದ ಸೌಲನೂ ಯೋನಾತಾನನೂ ಸತ್ತರೆಂಬ ವರ್ತಮಾನ ಬಂದಾಗ ಅವನು ಐದು ವರುಷದವನಾಗಿದ್ದನು. ಆಗ ಅವನ ದಾದಿಯು ಅವನನ್ನು ಎತ್ತಿಕೊಂಡು ಓಡಿ ಹೋದಳು. ಅವಳು ತ್ವರೆಯಾಗಿ ಓಡಿದಾಗ ಏನಾಯಿ ತಂದರೆ, ಅವನು ಬಿದ್ದು ಕುಂಟನಾದನು. ಅವನ ಹೆಸರು ಮೆಫೀಬೋಶೆತನು.

5ಬೇರೋತಿನ ಮಗನಾಗಿರುವ ರಿಮ್ಮೋನನ ಮಕ್ಕ ಳಾದ ರೇಕಾಬನೂ ಬಾಣನೂ ಹೊರಟು ಮಧ್ಯಾಹ್ನದ ಬಿಸಿಲಿನಲ್ಲಿ ಮಂಚದ ಮೇಲೆ ಮಲಗಿಕೊಂಡಿರುವ ಈಷ್ಬೋಶೆತನ ಮನೆಗೆ ಬಂದರು.

6ಗೋಧಿಯನ್ನು ತಕ್ಕೊಂಡು ಹೋಗುವವರಾಗಿ ನಡು ಮನೆಯೊಳಗೆ ಬಂದು ಅವನ ಐದನೇ ಎಲುಬಿನ ಸಂದಿನಲ್ಲಿ ತಿವಿದರು. ರೇಕಾಬನೂ ಅವನ ಸಹೋದರನಾದ ಬಾಣನೂ ತಪ್ಪಿಸಿಕೊಂಡು ಹೋದರು.

7ಅವರು ಮನೆಯೊಳಗೆ ಪ್ರವೇಶಿಸಿದಾಗ ಅವನು ಮಲಗುವ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದನು; ಇವರು ಅವನನ್ನು ಹೊಡೆದು ಕೊಂದುಹಾಕಿ ತಲೆಯನ್ನು ಕಡಿದು ಅದನ್ನು ತೆಗೆದುಕೊಂಡು ರಾತ್ರಿಯೆಲ್ಲಾ ಬೈಲಿನಲ್ಲಿ ನಡೆದು

೨ ಸಮುವೇಲನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी