ಯೆರೆಮಿಯ 47:2

ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಪ್ರವಾಹಗಳು ಉತ್ತರದಿಂದ ಬರು ತ್ತವೆ, ಅವು ತುಂಬಿ ತುಳುಕುವ ಪ್ರಳಯವಾಗುವದು; ದೇಶವನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಅದರ ನಿವಾಸಿಗಳನ್ನೂ ಆಕ್ರಮಿಸುವವು, ಆಗ ಮನು ಷ್ಯರು ಕೂಗುವರು, ದೇಶದ ನಿವಾಸಿಗಳೆಲ್ಲರೂ ಗೋಳಾ ಡುವರು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 47

1ಫರೋಹನು ಗಾಜಾವನ್ನು ಹೊಡೆಯುವದಕ್ಕಿಂತ ಮುಂಚೆ ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಬಂದ ಕರ್ತನ ವಾಕ್ಯವು.

2ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಪ್ರವಾಹಗಳು ಉತ್ತರದಿಂದ ಬರು ತ್ತವೆ, ಅವು ತುಂಬಿ ತುಳುಕುವ ಪ್ರಳಯವಾಗುವದು; ದೇಶವನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಅದರ ನಿವಾಸಿಗಳನ್ನೂ ಆಕ್ರಮಿಸುವವು, ಆಗ ಮನು ಷ್ಯರು ಕೂಗುವರು, ದೇಶದ ನಿವಾಸಿಗಳೆಲ್ಲರೂ ಗೋಳಾ ಡುವರು.

3ಅವನ ಬಲವಾದ ಕುದುರೆಗಳ ಗೊರಸು ಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಚಕ್ರಗಳ ಧ್ವನಿಯಿಂದಲೂ ತಂದೆ ಗಳ ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂತಿರುಗಿ ನೋಡರು.

4ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವದಕ್ಕೂ ತೂರಿನಿಂದ ಚೀದೋನಿನಿಂದ ಉಳಿದ ಪ್ರತಿ ಸಹಾಯಕನನ್ನು ಕಡಿದು ಬಿಡುವದಕ್ಕೂ ಆ ದಿವಸ ಬಂತು. ಕರ್ತನು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆ ಮಾಡುವನು.

ಯೆರೆಮಿಯ 47 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी