ಮತ್ತಾಯನು 6:22

ಕಣ್ಣು ಶರೀರದ ದೀಪವಾಗಿದೆ. ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು.

ಸಂದರ್ಭದೊಂದಿಗೆ ಓದಿ · ಮತ್ತಾಯನು 6

20ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ.

21ಯಾಕಂದರೆ ನಿಮ್ಮ ಸಂಪತ್ತು ಎಲ್ಲಿ ಇದೆಯೋ ಅಲ್ಲಿ ನಿಮ್ಮ ಹೃದಯವೂ ಇರುವದು.

22ಕಣ್ಣು ಶರೀರದ ದೀಪವಾಗಿದೆ. ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು.

23ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು.

24ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.

ಮತ್ತಾಯನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी