ಯೆಹೆಜ್ಕೇಲನು 13:11

ಸುಣ್ಣ ಹಚ್ಚುತ್ತಿರುವವನಿಗೆ--ಅದು ಬೀಳುವದೆಂದು ಹೇಳು; ಅಲ್ಲಿ ವಿಪರೀತ ಮಳೆ ಬರುವದು ಮತ್ತು ದೊಡ್ಡ ಕಲ್ಮಳೆಯು ಬೀಳುವದು; ಬಿರುಗಾಳಿಯು ಅದನ್ನು ಸೀಳಿಬಿಡುವದು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 13

9ವ್ಯರ್ಥವಾದದ್ದನ್ನು ದರ್ಶಿಸಿ, ಸುಳ್ಳು ಭವಿಷ್ಯಗಳನ್ನು ಹೇಳುವ ಪ್ರವಾದಿಗಳ ಮೇಲೆ ನನ್ನ ಕೈ ಮಾಡುವೆನು. ಅವರು ನನ್ನ ಜನರ ಸಭೆಯಲ್ಲಿ ಇರುವದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲ್ಪಡುವದೂ ಇಲ್ಲ; ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವದೂ ಇಲ್ಲ; ನಾನೇ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.

10ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ

11ಸುಣ್ಣ ಹಚ್ಚುತ್ತಿರುವವನಿಗೆ--ಅದು ಬೀಳುವದೆಂದು ಹೇಳು; ಅಲ್ಲಿ ವಿಪರೀತ ಮಳೆ ಬರುವದು ಮತ್ತು ದೊಡ್ಡ ಕಲ್ಮಳೆಯು ಬೀಳುವದು; ಬಿರುಗಾಳಿಯು ಅದನ್ನು ಸೀಳಿಬಿಡುವದು.

12ಇಗೋ, ಗೋಡೆ ಬಿದ್ದು ಹೋದಮೇಲೆ--ನೀವು ಹಚ್ಚಿದ ಸುಣ್ಣ ಎಲ್ಲಿ ಎಂದು ನಿಮಗೆ ಹೇಳುವರಲ್ಲಾ?

13ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅದನ್ನು ನನ್ನ ಉರಿಯಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶ ಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳೂ ಸುರಿಯುವವು;

ಯೆಹೆಜ್ಕೇಲನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी