ಆದ ಕಾರಣ--ಇಗೋ, ನಾನು ಅವನೊಂದಿಗೆ ನನ್ನ ಸಮಾಧಾನದ ಒಡಂಬಡಿಕೆಯನ್ನು ಮಾಡುತ್ತೇನೆ ಎಂದು ಹೇಳು.
10ಆಗ ಕರ್ತನು ಮೋಶೆಗೆ--
11ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ.
12ಆದ ಕಾರಣ--ಇಗೋ, ನಾನು ಅವನೊಂದಿಗೆ ನನ್ನ ಸಮಾಧಾನದ ಒಡಂಬಡಿಕೆಯನ್ನು ಮಾಡುತ್ತೇನೆ ಎಂದು ಹೇಳು.
13ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು.
14ಆದರೆ ಮಿದ್ಯಾನ್ ಸ್ತ್ರೀಯ ಸಂಗಡ ಕೊಲ್ಲಲ್ಪಟ್ಟ ಆ ಇಸ್ರಾಯೇಲಿನವನ ಹೆಸರು ಜಿವ್ರೆಾ; ಅವನು ಸಾಲೂವಿನ ಮಗನು; ಸಿಮೆಯೋನ್ಯರ ತಂದೆ ಮನೆಯ ಪ್ರಧಾನನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ