ಯಾಜಕಕಾಂಡ 20:22

ಆದದರಿಂದ ನೀವು ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ಹೀಗಿದ್ದರೆ ನೀವು ವಾಸಿಸುವದಕ್ಕೆ ನಾನು ನಿಮ್ಮನ್ನು ತರುವ ಆ ದೇಶವು ನಿಮ್ಮನ್ನು ಕಾರಿಬಿಡುವದಿಲ್ಲ.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 20

20ಒಬ್ಬನು ತನ್ನ ಚಿಕ್ಕಪ್ಪನ ಹೆಂಡತಿಯೊಂದಿಗೆ ಸಂಗಮಿಸಿದರೆ ಅವನು ತನ್ನ ಚಿಕ್ಕಪ್ಪನ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ತಮ್ಮ ಪಾಪವನ್ನು ಹೊತ್ತುಕೊಳ್ಳಬೇಕು; ಅವರು ಮಕ್ಕಳಿಲ್ಲದೆ ಸಾಯು ವರು.

21ಇದಲ್ಲದೆ ಒಬ್ಬನು ತನ್ನ ಸಹೋದರನ ಹೆಂಡತಿಯನ್ನು ತೆಗೆದುಕೊಂಡರೆ ಅದು ಅಶುದ್ಧ ವಾದದ್ದು; ಅವನು ತನ್ನ ಸಹೋದರನ ಬೆತ್ತಲೆ ತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ಮಕ್ಕಳಿ ಲ್ಲದವರಾಗುವರು.

22ಆದದರಿಂದ ನೀವು ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ಹೀಗಿದ್ದರೆ ನೀವು ವಾಸಿಸುವದಕ್ಕೆ ನಾನು ನಿಮ್ಮನ್ನು ತರುವ ಆ ದೇಶವು ನಿಮ್ಮನ್ನು ಕಾರಿಬಿಡುವದಿಲ್ಲ.

23ನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು; ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ; ಆದಕಾರಣ ನಾನು ಅವರನ್ನು ಅಸಹ್ಯಿಸಿಕೊಂಡಿದ್ದೇನೆ.

24ನಾನು ನಿಮಗೆ ಹೇಳಿದ್ದೇನಂದರೆ--ನೀವು ಅವರ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ. ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಕರ್ತನು ನಾನೇ.

ಯಾಜಕಕಾಂಡ 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी