ಆದಿಕಾಂಡ 18:30

ಅವನು-- ಕರ್ತನಿಗೆ ಕೋಪಬಾರದೆ ಇರಲಿ; ನಾನು ಮಾತನಾ ಡುತ್ತೇನೆ--ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಸಿಕ್ಕಾರು ಅಂದಾಗ ಆತನು--ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ನಾಶಮಾಡುವದಿಲ್ಲ ಅಂದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 18

28ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಕಡಿಮೆ ಇದ್ದರೆ ಆ ಐದು ಮಂದಿ ಇಲ್ಲದ್ದರಿಂದ ಆ ಪಟ್ಟಣವನ್ನು ನಾಶಮಾಡುವಿಯೋ ಎಂದು ಪ್ರತ್ಯುತ್ತರವಾಗಿ ಅಂದನು. ಆದಕ್ಕೆ ಆತನು--ನಾಲ್ವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವದಿಲ್ಲ ಅಂದನು.

29ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ--ಒಂದು ವೇಳೆ ಅಲ್ಲಿ ನಾಲ್ವತ್ತು ಮಂದಿ ಸಿಕ್ಕಾರು ಅಂದನು. ಅದಕ್ಕೆ ಆತನು--ನಾಲ್ವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವದಿಲ್ಲ ಅಂದನು.

30ಅವನು-- ಕರ್ತನಿಗೆ ಕೋಪಬಾರದೆ ಇರಲಿ; ನಾನು ಮಾತನಾ ಡುತ್ತೇನೆ--ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಸಿಕ್ಕಾರು ಅಂದಾಗ ಆತನು--ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ನಾಶಮಾಡುವದಿಲ್ಲ ಅಂದನು.

31ಅವನು--ಇಗೋ, ಕರ್ತನ ಸಂಗಡ ಮಾತನಾಡು ವದಕ್ಕೆ ಮುಂಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು ಅಂದಾಗ ಆತನು-- ಆ ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವದಿಲ್ಲ ಅಂದನು.

32ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು.

ಆದಿಕಾಂಡ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी