ಧರ್ಮೋಪದೇಶಕಾಂಡ 28:27

ಕರ್ತನು ನಿನ್ನನ್ನು ಐಗುಪ್ತದ ಹುಣ್ಣುಗಳಿಂದಲೂ ಗಡ್ಡೆವ್ಯಾಧಿಯಿಂದಲೂ ಕಜ್ಜಿಯಿಂದಲೂ ಇಸಬಿನಿಂದ ಲೂ ನೀನು ವಾಸಿಯಾಗಕೂಡದ ಹಾಗೆ ಹೊಡೆ ಯುವನು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 28

25ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.

26ನಿಮ್ಮ ಹೆಣಗಳು ಆಕಾಶದ ಎಲ್ಲಾ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗು ವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.

27ಕರ್ತನು ನಿನ್ನನ್ನು ಐಗುಪ್ತದ ಹುಣ್ಣುಗಳಿಂದಲೂ ಗಡ್ಡೆವ್ಯಾಧಿಯಿಂದಲೂ ಕಜ್ಜಿಯಿಂದಲೂ ಇಸಬಿನಿಂದ ಲೂ ನೀನು ವಾಸಿಯಾಗಕೂಡದ ಹಾಗೆ ಹೊಡೆ ಯುವನು.

28ಕರ್ತನು ನಿನ್ನನ್ನು ಹುಚ್ಚುತನದಿಂದಲೂ ಕುರುಡುತನದಿಂದಲೂ ಹೃದಯದ ವಿಸ್ಮಯದಿಂದಲೂ ಹೊಡೆಯುವನು.

29ಕುರುಡನು ಕತ್ತಲಲ್ಲಿ ತಡವರಿಸು ವಂತೆ ಮಧ್ಯಾಹ್ನದಲ್ಲಿ ತಡವರಿಸುತ್ತಾ ಇರುವಿ; ನಿನ್ನ ಮಾರ್ಗಗಳಲ್ಲಿ ಸಫಲವಾಗುವದಿಲ್ಲ; ನೀನು ಯಾವಾ ಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ ಸುಲಿಗೆ ಯನ್ನೂ ಅನುಭವಿಸುವವನಾಗುವಿ.

ಧರ್ಮೋಪದೇಶಕಾಂಡ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी