೧ ಪೂರ್ವಕಾಲವೃತ್ತಾಂತ 18:9

ಆದರೆ ಹಮಾತಿನ ಅರಸನಾದ ತೋವನಿಗೆ ಹದ ರೆಜರನ ಸಂಗಡ ಯುದ್ಧ ಉಂಟಾಗಿದ್ದದರಿಂದ ದಾವೀದನು ಹದರೆಜರನ ಸಮಸ್ತ ಸೈನ್ಯವನ್ನು ಹೊಡೆದ ವರ್ತಮಾನವನ್ನು ತೋವಿಗೆ ಮುಟ್ಟಿದಾಗ

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 18

7ಆಗ ದಾವೀದನು ಹದರೆಜರನ ಸೇವಕರಿಗುಂಟಾದ ಬಂಗಾ ರದ ಗುರಾಣಿಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು.

8ಇದಲ್ಲದೆ ಹದರೆಜರನ ಪಟ್ಟಣಗಳಾದ ಟಭತಿನಿಂದಲೂ ಕೂನಿನಿಂದಲೂ ದಾವೀದನು ಅತ್ಯಧಿಕವಾಗಿ ತಾಮ್ರವನ್ನು ತಂದನು. ಅದರಿಂದ ಸೊಲೊಮೋನನು ತಾಮ್ರದ ಸಮುದ್ರ ವನ್ನೂ ಸ್ತಂಭಗಳನ್ನೂ ತಾಮ್ರದ ಪಾತ್ರೆಗಳನ್ನೂ ಮಾಡಿಸಿದನು.

9ಆದರೆ ಹಮಾತಿನ ಅರಸನಾದ ತೋವನಿಗೆ ಹದ ರೆಜರನ ಸಂಗಡ ಯುದ್ಧ ಉಂಟಾಗಿದ್ದದರಿಂದ ದಾವೀದನು ಹದರೆಜರನ ಸಮಸ್ತ ಸೈನ್ಯವನ್ನು ಹೊಡೆದ ವರ್ತಮಾನವನ್ನು ತೋವಿಗೆ ಮುಟ್ಟಿದಾಗ

10ಅರಸ ನಾದ ದಾವೀದನ ಕ್ಷೇಮ ಸಮಾಚಾರವನ್ನು ವಿಚಾರಿ ಸಲೂ ಹದರೆಜರನ ಸಂಗಡ ಯುದ್ಧ ಮಾಡಿ ಅವನನ್ನು ಹೊಡೆದದ್ದಕ್ಕೋಸ್ಕರ ಅವನನ್ನು ಆಶೀರ್ವದಿಸಲೂ ತೋವನು ತನ್ನ ಕುಮಾರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ ಬಂಗಾರ ತಾಮ್ರದ ಪಾತ್ರೆಗಳು ಸಹಿತವಾಗಿ ಅವನ ಬಳಿಗೆ ಕಳುಹಿಸಿದನು.

11ಇವುಗಳನ್ನು ಅರಸನಾದ ದಾವೀದನು ಎದೋಮ್ಯರು ಮೋವಾಬ್ಯರು ಅಮ್ಮೋನನ ಮಕ್ಕಳು ಫಿಲಿಷ್ಟಿಯರು ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿ ಬಂಗಾರವನ್ನು ಕರ್ತನಿಗೆ ಪ್ರತಿಷ್ಠೆಮಾಡಿದನು.

೧ ಪೂರ್ವಕಾಲವೃತ್ತಾಂತ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी