ಸೊಲೊಮೋನನು ಚೀದೋನ್ಯರ ದೇವತೆಯಾದ ಅಷ್ಟೋರೆತನ್ನೂ ಅಮ್ಮೋ ನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾ ಲಿಸಿದನು.
3ಅವನಿಗೆ ಅರಸುಗಳ ಕುಮಾರ್ತೆಯರಾದ ಏಳು ನೂರು ಮಂದಿ ಪತ್ನಿಯರೂ ಮುನ್ನೂರು ಮಂದಿ ಉಪಪತ್ನಿಗಳೂ ಇದ್ದರು. ಅವನ ಪತ್ನಿಯರು ಅವನ ಹೃದಯವನ್ನು ತಿರುಗಿಸಿದರು.
4ಸೊಲೊಮೋನನು ಮುದುಕನಾದ ಕಾಲದಲ್ಲಿ ಏನಾಯಿತಂದರೆ, ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗ ಮಾಡಿದರು. ಅವನ ಹೃದಯವು ತನ್ನ ತಂದೆಯಾದ ದಾವೀದನ ಹೃದಯದ ಹಾಗೆ ತನ್ನ ದೇವರಾದ ಕರ್ತನ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.
5ಸೊಲೊಮೋನನು ಚೀದೋನ್ಯರ ದೇವತೆಯಾದ ಅಷ್ಟೋರೆತನ್ನೂ ಅಮ್ಮೋ ನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾ ಲಿಸಿದನು.
6ಹೀಗೆಯೇ ಸೊಲೊಮೋನನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸದೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.
7ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷ್ಗೋಸ್ಕ ರವೂ ಅಮ್ಮೋನನ ಮಕ್ಕಳ ಅಸಹ್ಯಕರವಾದ ಮೋಲೆ ಕ್ನಿಗೋಸ್ಕರವೂ ಯೆರೂಸಲೇಮಿಗೆ ಎದುರಾಗಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ