ಬೆಳಗಿನ ಜಾವದಲ್ಲಿ ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇನಂದರೆ--
6ಅವರ ಕಣ್ಣು ಗಳ ಮುಂದೆ ಸಾಮಾಗ್ರಿಯನ್ನು ಹೆಗಲಿನ ಮೇಲೆ ಹೊತ್ತುಕೊಂಡು ನಸುಬೆಳಕಿನಲ್ಲಿ ಹೋಗಬೇಕು; ನೆಲ ವನ್ನು ನೋಡದ ಹಾಗೆ ನಿನ್ನ ಮುಖವನ್ನು ಮುಚ್ಚಿ ಕೊಳ್ಳಬೇಕು. ನಾನು ನಿನ್ನನ್ನು ಇಸ್ರಾಯೇಲಿನ ಮನೆತನ ದಲ್ಲಿರುವವರಿಗೆ ಗುರುತನ್ನಾಗಿ ಇಟ್ಟಿದ್ದೇನೆ.
7ನಾನು ಆಜ್ಞೆಯನ್ನು ಹೊಂದಿದ ಪ್ರಕಾರ ಮಾಡಿದೆನು; ನನ್ನ ಸಾಮಗ್ರಿಗಳನ್ನು ಸೆರೆಯ ಸಾಮಗ್ರಿಗಳಂತೆ ಹಗಲಿ ನಲ್ಲಿಯೇ ಹೊರಗೆ ತಂದೆನು; ನಸುಬೆಳಕಿನಲ್ಲಿ ನನ್ನ ಕೈಯಿಂದಲೇ ಗೋಡೆಯನ್ನು ಕೊರೆದೆನು; ಅದನ್ನು ನಾನು ನಸುಬೆಳಕಿನಲ್ಲಿ ಹೊರಗೆ ತಂದು ಅವರ ಕಣ್ಣುಗಳ ಮುಂದೆ ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದೆನು.
8ಬೆಳಗಿನ ಜಾವದಲ್ಲಿ ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇನಂದರೆ--
9ಮನುಷ್ಯ ಪುತ್ರನೇ, ಆ ಇಸ್ರಾಯೇಲಿನ ಮನೆತನದವರು ತಿರುಗಿ ಬೀಳುವ ಮನೆತನದವರಲ್ಲವೇ? ನೀನು ಏನು ಮಾಡುತ್ತೀ ಎಂದು ಹೇಳುತ್ತಾರಲ್ಲಾ.
10ಅವರಿಗೆ ನೀನು ಹೀಗೆ ಹೇಳಬೇಕು ಎಂದು ದೇವರಾದ ಕರ್ತನು ಹೇಳುತ್ತಾನೆ--ಈ ಭಾರವು ಯೆರೂಸಲೇಮಿನಲ್ಲಿರುವ ಪ್ರಭುವನ್ನೂ ಅದರ ಮಧ್ಯದಲ್ಲಿರುವ ಸಮಸ್ತ ಇಸ್ರಾ ಯೇಲಿನ ಮನೆತನದವರನ್ನೂ ಕುರಿತದ್ದಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ