ಯೆಶಾಯ 59:3

ನಿಮ್ಮ ಕೈಗಳು ರಕ್ತದಿಂದಲೂ ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ; ನಿಮ್ಮ ತುಟಿಗಳು ಸುಳ್ಳನ್ನು ಮಾತಾಡುತ್ತವೆ; ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ.

ಸಂದರ್ಭದೊಂದಿಗೆ ಓದಿ · ಯೆಶಾಯ 59

1ಇಗೋ, ಕರ್ತನ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ. ಆತನ ಕಿವಿ ಕೇಳ ಲಾರದ ಹಾಗೆ ಕಿವುಡಲ್ಲ.

2ನಿಮ್ಮ ಅಕ್ರಮಗಳೇ ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿಯವೆ; ನಿಮ್ಮ ಪಾಪಗಳೇ ಆತನು ಕೇಳದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಯವೆ.

3ನಿಮ್ಮ ಕೈಗಳು ರಕ್ತದಿಂದಲೂ ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ; ನಿಮ್ಮ ತುಟಿಗಳು ಸುಳ್ಳನ್ನು ಮಾತಾಡುತ್ತವೆ; ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ.

4ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ.

5ಹಾವಿನಂತೆ ಮೊಟ್ಟೆಗಳನ್ನು ಮರಿ ಮಾಡುತ್ತಾರೆ, ಜೇಡಹುಳದ ನೂಲನ್ನು ನೇಯುತ್ತಾರೆ; ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು; ಒಡೆಯುವಂಥಾದ್ದರಿಂದ ವಿಷದ ಮರಿಯು ಹೊರಡುವದು.

ಯೆಶಾಯ 59 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी