ಮಿಕ 4:9

ಈಗ ಯಾಕೆ ಗಟ್ಟಿಯಾಗಿ ಕೂಗುತ್ತೀ? ನಿನ್ನಲ್ಲಿ ಅರಸನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶ ವಾದನೋ? ಹೆರುವವಳಂತೆ ನಿನಗೆ ವೇದನೆ ಬಂತು.

ಸಂದರ್ಭದೊಂದಿಗೆ ಓದಿ · ಮಿಕ 4

7ಕುಂಟಾದದ್ದನ್ನು ಉಳಿದದ್ದ ನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾ ಗಿಯೂ ಮಾಡುವೆನು; ಕರ್ತನು ಇಂದಿನಿಂದ ಸದಾ ಕಾಲವೂ ಚೀಯೋನ್‌ ಪರ್ವತದಲ್ಲಿ ಅವರ ಮೇಲೆ ಆಳುವನು,

8ಇದಲ್ಲದೆ ನೀನು ಮಂದೆಯ ಬುರುಜೇ ಚೀಯೋನಿನ ಕುಮಾರ್ತೆಯ ದುರ್ಗವೇ, ನಿನಗೆ ಬರು ವದು, ಹೌದು, ಮೊದಲನೇ ದೊರೆತನವೂ ಯೆರೂ ಸಲೇಮಿನ ಕುಮಾರ್ತೆಗೆ ರಾಜ್ಯವೂ ಬರುವದು.

9ಈಗ ಯಾಕೆ ಗಟ್ಟಿಯಾಗಿ ಕೂಗುತ್ತೀ? ನಿನ್ನಲ್ಲಿ ಅರಸನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶ ವಾದನೋ? ಹೆರುವವಳಂತೆ ನಿನಗೆ ವೇದನೆ ಬಂತು.

10ಚೀಯೋನಿನ ಕುಮಾರ್ತೆಯೇ, ಹೆರುವವಳಂತೆ ವೇದನೆಪಡು. ಈಗ ಪಟ್ಟಣದೊಳಗಿಂದ ಹೊರಟು ಹೊಲದಲ್ಲಿ ವಾಸಮಾಡಿ ಬಾಬೆಲಿಗೆ ಹೋಗುವಿ; ಅಲ್ಲಿ ನಿನಗೆ ಬಿಡುಗಡೆಯಾಗುವದು; ಅಲ್ಲಿ ಕರ್ತನು ನಿನ್ನನ್ನು ನಿನ್ನ ಶತ್ರುಗಳ ಕೈಯೊಳಗಿಂದ ವಿಮೋಚಿ ಸುವನು.

11ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ; ಅವರು--ಅವಳು ಕೆಡಿಸಲ್ಪಡಲಿ, ಚೀಯೋನಿನ ಮೇಲೆ ನಮ್ಮ ಕಣ್ಣುಗಳು ದೃಷ್ಟಿಸಲಿ ಎಂದು ಹೇಳುತ್ತಾರೆ.

ಮಿಕ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी