ಯಾಜಕಕಾಂಡ 20:7

ಆದದರಿಂದ ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ಪರಿಶುದ್ಧರಾಗಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 20

5ಆಗ ನಾನು ಆ ಮನುಷ್ಯನಿಗೂ ಅವನ ಕುಟುಂಬಕ್ಕೂ ವಿರೋಧವಾ ಗಿಯೂ ವಿಮುಖನಾಗಿಯೂ ಇರುವೆನು. ಮೋಲೆಕ ನೊಂದಿಗೆ ವ್ಯಭಿಚಾರಮಾಡಿದ್ದಕ್ಕಾಗಿ ಅವನನೂ ವ್ಯಭಿಚಾರಮಾಡುವದಕ್ಕೆ ಹಿಂಬಾಲಿಸುವವರೆಲ್ಲರನ್ನೂ ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.

6ಮಂತ್ರವಾದಿಗಳ ಕಡೆಗೆ ತಿರುಗಿ ಕೊಳ್ಳುವವನಿಗೂ ವ್ಯಭಿಚಾರಮಾಡುವಂತೆ ಮಾಟಗಾರರನ್ನು ಹಿಂಬಾಲಿಸುವವನಿಗೂ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.

7ಆದದರಿಂದ ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ಪರಿಶುದ್ಧರಾಗಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.

8ನೀವು ನನ್ನ ನಿಯಮಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ನಿಮ್ಮನ್ನು ಶುದ್ಧಪಡಿಸುವ ಕರ್ತನು ನಾನೇ.

9ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವ ವನಿಗೆ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು; ಯಾವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವನೋ ಅವನ ರಕ್ತವು ಅವನ ಮೇಲೆಯೇ ಇರುವದು.

ಯಾಜಕಕಾಂಡ 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी