ಯೆಹೋಶುವ 7:23

ಅವರು ಅವುಗಳನ್ನು ಡೇರೆಯ ಮಧ್ಯದಿಂದ ತೆಗೆದುಕೊಂಡು ಯೆಹೋಶುವನ ಬಳಿಗೂ ಸಮಸ್ತ ಇಸ್ರಾಯೇಲ್‌ ಮಕ್ಕಳ ಬಳಿಗೂ ತಂದು ಕರ್ತನ ಮುಂದೆ ಇಟ್ಟರು.

ಸಂದರ್ಭದೊಂದಿಗೆ ಓದಿ · ಯೆಹೋಶುವ 7

21ಏನಂದರೆ, ನಾನು ಕೊಳ್ಳೆಯಲ್ಲಿ ಬಾಬೆಲಿನ ಒಂದು ಒಳ್ಳೇ ನಿಲುವಂಗಿಯನ್ನೂ ಇನ್ನೂರು ಬೆಳ್ಳಿ ಶೇಕೆಲುಗಳನ್ನೂ ಐವತ್ತು ಶೇಕೆಲ್‌ ತೂಕವಾದ ಒಂದು ಬಂಗಾರದ ಗಟ್ಟಿಯನ್ನೂ ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು; ಇಗೋ, ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ; ಬೆಳ್ಳಿಯೂ ಅದರ ಕೆಳಗೆ ಇದೆ ಅಂದನು.

22ಆಗ ಯೆಹೋಶುವನು ದೂತರನ್ನು ಕಳುಹಿಸಿದನು; ಅವರು ಡೇರೆಗಳಿಗೆ ಓಡಿದರು; ಇಗೋ, ಡೇರೆಯಲ್ಲಿ ಅವು ಬಚ್ಚಿಡಲ್ಪಟ್ಟಿದ್ದವು; ಬೆಳ್ಳಿಯು ಅದರ ಕೆಳಗೆ ಇತ್ತು.

23ಅವರು ಅವುಗಳನ್ನು ಡೇರೆಯ ಮಧ್ಯದಿಂದ ತೆಗೆದುಕೊಂಡು ಯೆಹೋಶುವನ ಬಳಿಗೂ ಸಮಸ್ತ ಇಸ್ರಾಯೇಲ್‌ ಮಕ್ಕಳ ಬಳಿಗೂ ತಂದು ಕರ್ತನ ಮುಂದೆ ಇಟ್ಟರು.

24ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು.

25ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟು

ಯೆಹೋಶುವ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी