ಯಾಜಕಕಾಂಡ 27:13

ಅದನ್ನು ಹೇಗಾದರೂ ವಿಮೋಚಿಸ ಬೇಕೆಂದಿದ್ದರೆ ನೀನು ಮಾಡಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅದಕ್ಕೆ ಕೂಡಿಸಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 27

11ಅದು ಕರ್ತನಿಗೆ ಅರ್ಪಣೆಯಾಗಿ ತಾರದ ಯಾವದಾದರೂ ಅಶುದ್ಧ ಪಶುವಾಗಿದ್ದರೆ ಆ ಪಶುವನ್ನು ಅವನು ಯಾಜಕನ ಮುಂದೆ ನಿಲ್ಲಿಸಬೇಕು.

12ಆಗ ಯಾಜಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಅದಕ್ಕೆ ಕ್ರಯಕಟ್ಟಬೇಕು. ಯಾಜಕನಾದ ನೀನು ಮಾಡಿದ ಕ್ರಯವೇ ಕ್ರಯವಾ ಗಿರಬೇಕು.

13ಅದನ್ನು ಹೇಗಾದರೂ ವಿಮೋಚಿಸ ಬೇಕೆಂದಿದ್ದರೆ ನೀನು ಮಾಡಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅದಕ್ಕೆ ಕೂಡಿಸಬೇಕು.

14ಒಬ್ಬನು ತನ್ನ ಮನೆಯನ್ನು ಕರ್ತನಿಗೆ ಪರಿಶುದ್ಧ ವಾಗಿರಲೆಂದು ಅದನ್ನು ಪರಿಶುದ್ಧ ಮಾಡಿದರೆ ಯಾಜ ಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಕ್ರಯವನ್ನು ಕಟ್ಟಬೇಕು; ಯಾಜಕನು ಕ್ರಯಕಟ್ಟುವ ಪ್ರಕಾರವೇ ಅದು ಸ್ಥಿರವಾಗಿರಬೇಕು.

15ಆದರೆ ಪರಿಶುದ್ಧ ಮಾಡಿ ದವನು ತನ್ನ ಮನೆಯನ್ನು ವಿಮೋಚಿಸಬೇಕೆಂದಿದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಪಾಲಿನ ಹಣವನ್ನು ಕೊಡಲಿ; ಆಗ ಅದು ಅವನದಾಗಿರುವದು.

ಯಾಜಕಕಾಂಡ 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी