ಇದು ಫಲ ಫಲಿಸಿದರೆ ಸರಿ; ಇಲ್ಲವಾದರೆ ನೀನು ಇದನ್ನು ಕಡಿದುಹಾಕಬಹುದು ಅಂದನು.
7ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು.
8ಆದರೆ ಅವನು ಪ್ರತ್ಯುತ್ತರವಾಗಿ ಅವ ನಿಗೆ--ಒಡೆಯನೇ, ನಾನು ಅದರ ಸುತ್ತಲೂ ಅಗೆದು ಗೊಬ್ಬರ ಹಾಕುವ ವರೆಗೆ ಈ ವರುಷವೂ ಇದನ್ನು ಬಿಡು;
9ಇದು ಫಲ ಫಲಿಸಿದರೆ ಸರಿ; ಇಲ್ಲವಾದರೆ ನೀನು ಇದನ್ನು ಕಡಿದುಹಾಕಬಹುದು ಅಂದನು.
10ಆತನು ಸಬ್ಬತ್ತಿನಲ್ಲಿ ಸಭಾಮಂದಿರದಲ್ಲಿ ಬೋಧಿ ಸುತ್ತಾ ಇದ್ದನು.
11ಆಗ ಇಗೋ, ಹದಿನೆಂಟು ವರುಷ ಗಳಿಂದಲೂ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬೊಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು; ಅವಳು ಯಾವ ರೀತಿಯಲ್ಲಿಯೂ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ