ಆದಿಕಾಂಡ 29:11

ಆಗ ಯಾಕೋ ಬನು ರಾಹೇಲಳಿಗೆ ಮುದ್ದಿಟ್ಟು ತನ್ನ ಸ್ವರವನ್ನೆತ್ತಿ ಗಟ್ಟಿಯಾಗಿ ಅತ್ತನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 29

9ಯಾಕೋಬನು ಇನ್ನೂ ಅವರ ಸಂಗಡ ಮಾತನಾಡು ತ್ತಿದ್ದಾಗ ಕುರಿಗಳನ್ನು ಮೇಯಿಸುವವಳಾಗಿದ್ದ ರಾಹೇ ಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು.

10ಯಾಕೋಬನು ತನ್ನ ತಾಯಿಯ ಸಹೋದರನಾದ ಲಾಬಾನನ ಮಗಳಾದ ರಾಹೇಲಳನ್ನೂ ಅವನ ಕುರಿಗಳನ್ನೂ ನೋಡಿದಾಗ ಯಾಕೋಬನು ಹತ್ತಿರ ಬಂದು ಬಾವಿಯ ಮೇಲಿದ್ದ ಕಲ್ಲನ್ನು ಹೊರಳಿಸಿ ತನ್ನ ತಾಯಿಯ ಸಹೋದರನಾದ ಲಾಬಾನನ ಕುರಿಗಳಿಗೆ ನೀರನ್ನು ಕುಡಿಸಿದನು.

11ಆಗ ಯಾಕೋ ಬನು ರಾಹೇಲಳಿಗೆ ಮುದ್ದಿಟ್ಟು ತನ್ನ ಸ್ವರವನ್ನೆತ್ತಿ ಗಟ್ಟಿಯಾಗಿ ಅತ್ತನು.

12ಯಾಕೋಬನು ರಾಹೇಲಳಿಗೆ ತಾನು ಆಕೆಯ ತಂದೆಗೆ ಸೋದರಳಿಯನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ಆಕೆಯು ಓಡಿಹೋಗಿ ತನ್ನ ತಂದೆಗೆ ತಿಳಿಸಿದಳು.

13ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನ ಸುದ್ದಿಯನ್ನು ಕೇಳಿದಾಗ ಅವನನ್ನು ಸಂಧಿಸುವದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.

ಆದಿಕಾಂಡ 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी