ನಾನು ನಿಮಗೆ ಹೇಳಿದ್ದನ್ನೆಲ್ಲಾ ಕೈಕೊಳ್ಳಬೇಕು; ಬೇರೆ ದೇವರುಗಳ ಹೆಸರನ್ನು ಎತ್ತಬೇಡ, ಇಲ್ಲವೆ ನಿನ್ನ ಬಾಯಿಂದ ಅದು ಹೊರಡಬಾರದು.
11ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು ಅದನ್ನು ಬೀಳು ಬಿಡಬೇಕು. ಆಗ ನಿನ್ನ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ; ಅವರು ಬಿಟ್ಟದ್ದನ್ನು ಹೊಲದ ಪಶುಗಳು ತಿನ್ನಲಿ. ಹೀಗೆ ನಿನ್ನ ದ್ರಾಕ್ಷೇ ತೋಟದಲ್ಲಿಯೂ ಎಣ್ಣೇಮರಗಳ ತೋಪಿನಲ್ಲಿಯೂ ಮಾಡಬೇಕು.
12ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ.
13ನಾನು ನಿಮಗೆ ಹೇಳಿದ್ದನ್ನೆಲ್ಲಾ ಕೈಕೊಳ್ಳಬೇಕು; ಬೇರೆ ದೇವರುಗಳ ಹೆಸರನ್ನು ಎತ್ತಬೇಡ, ಇಲ್ಲವೆ ನಿನ್ನ ಬಾಯಿಂದ ಅದು ಹೊರಡಬಾರದು.
14ವರುಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡ ಬೇಕು.
15ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ