೨ ತಿಮೊಥೆಯನಿಗೆ 1:7

ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಸ್ವಸ್ಥಬುದ್ಧಿಯ ಆತ್ಮವೇ ಹೊರತು ಭಯದ ಆತ್ಮವಲ್ಲ.

ಸಂದರ್ಭದೊಂದಿಗೆ ಓದಿ · ೨ ತಿಮೊಥೆಯನಿಗೆ 1

5ನಿನ್ನಲ್ಲಿರುವ ನಿಷ್ಕಪಟ ವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ಮೊದಲು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು: ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ನಾನು ದೃಢವಾಗಿ ನಂಬಿದ್ದೇನೆ.

6ಆದಕಾರಣ ನಾನು ನಿನಗೆ ಹಸ್ತಾರ್ಪಣ ಮಾಡು ವದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.

7ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಸ್ವಸ್ಥಬುದ್ಧಿಯ ಆತ್ಮವೇ ಹೊರತು ಭಯದ ಆತ್ಮವಲ್ಲ.

8ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.

9ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.

೨ ತಿಮೊಥೆಯನಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी