೧ ಸಮುವೇಲನು 30:18

ಅಮಾ ಲೇಕ್ಯರು ತಕ್ಕೊಂಡು ಹೋದದ್ದನ್ನೆಲ್ಲಾ ದಾವೀದನು ಬಿಡಿಸಿಕೊಂಡನು. ತನ್ನ ಇಬ್ಬರು ಹೆಂಡತಿಯರನ್ನು ದಾವೀದನು ಬಿಡಿಸಿಕೊಂಡನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 30

16ಇವನು ದಾವೀದನನ್ನು ಕರಕೊಂಡು ಅಲ್ಲಿಗೆ ಹೋದಾಗ ಅವರು ಭೂಮಿಯ ಮೇಲೆ ಎಲ್ಲೆಲ್ಲಿಯೂ ಫಿಲಿಷ್ಟಿಯರ ದೇಶ ದಲ್ಲಿಯೂ ಯೆಹೂದ ದೇಶದಲ್ಲಿಯೂ ವ್ಯಾಪಿಸಿ ಕೊಂಡು ಎಲ್ಲಾ ಕೊಳ್ಳೆತಕ್ಕೊಂಡು ಬಂದದರಿಂದ ತಿಂದು ಕುಡಿದು ನಾಟ್ಯವಾಡಿಕೊಂಡಿದ್ದರು.

17ಆಗ ದಾವೀದನು ಅವರನ್ನು ಬೆಳಗಿನ ಜಾವದಿಂದ ಮಾರ ನೆಯ ದಿವಸದ ಸಾಯಂಕಾಲದವರೆಗೂ ಸಂಹರಿಸುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿಹೋದ ನಾನೂರು ಮಂದಿ ಯೌವನಸ್ಥರ ಹೊರತು ಒಬ್ಬನಾದರೂ ತಪ್ಪಿಸಿಕೊಂಡದ್ದಿಲ್ಲ.

18ಅಮಾ ಲೇಕ್ಯರು ತಕ್ಕೊಂಡು ಹೋದದ್ದನ್ನೆಲ್ಲಾ ದಾವೀದನು ಬಿಡಿಸಿಕೊಂಡನು. ತನ್ನ ಇಬ್ಬರು ಹೆಂಡತಿಯರನ್ನು ದಾವೀದನು ಬಿಡಿಸಿಕೊಂಡನು.

19ಅವರು ತಕ್ಕೊಂಡು ಹೋದ ಕಿರಿಯರ ಹಿರಿಯರಲ್ಲಾದರೂ ಕುಮಾರ ಕುಮಾರ್ತೆಯರಲ್ಲಾದರೂ ಕೊಳ್ಳೆಯಾದ ಯಾವ ವಸ್ತು ಗಳಲ್ಲಾದರೂ ಒಂದೂ ಕೊರತೆ ಇಲ್ಲದ ಹಾಗೆ ದಾವೀ ದನು ಎಲ್ಲವನ್ನೂ ತಿರಿಗಿ ತಕ್ಕೊಂಡನು.

20ಇದಲ್ಲದೆ ದಾವೀದನು ಅವರ ಎಲ್ಲಾ ಕುರಿ ಪಶುಗಳ ಮಂದೆಗ ಳನ್ನು ಹಿಡಿದನು; ಅವುಗಳನ್ನು ಇವರು ತಮ್ಮ ಪಶು ಗಳಿಗೆ ಮುಂದಾಗಿ ಹೊಡಕೊಂಡು ಹೋಗುತ್ತಾಇವು ದಾವೀದನ ಕೊಳ್ಳೆ ಎಂದು ಅಂದುಕೊಂಡರು.

೧ ಸಮುವೇಲನು 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी