ಮಲಾಕಿಯ 2:9

ಆದದರಿಂದ ನೀವು ನನ್ನ ಮಾರ್ಗಗಳನ್ನು ಕೈಕೊಳ್ಳದೆ, ನನ್ನ ನ್ಯಾಯ ಪ್ರಮಾಣದ ವಿಷಯವಾಗಿ ಮುಖದಾಕ್ಷಿಣ್ಯ ತೋರಿಸಿದ ಪ್ರಕಾರವೇ ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆ ಮಾಡಲ್ಪಟ್ಟ ವರನ್ನಾಗಿಯೂ ನೀಚರನ್ನಾಗಿಯೂ ಮಾಡಿದ್ದೇನೆ.

ಸಂದರ್ಭದೊಂದಿಗೆ ಓದಿ · ಮಲಾಕಿಯ 2

7ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.

8ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ; ಅನೇಕರನ್ನು ನ್ಯಾಯಪ್ರಮಾಣಕ್ಕೆ ಎಡವುವಂತೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಕೆಡಿಸಿದ್ದೀರೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.

9ಆದದರಿಂದ ನೀವು ನನ್ನ ಮಾರ್ಗಗಳನ್ನು ಕೈಕೊಳ್ಳದೆ, ನನ್ನ ನ್ಯಾಯ ಪ್ರಮಾಣದ ವಿಷಯವಾಗಿ ಮುಖದಾಕ್ಷಿಣ್ಯ ತೋರಿಸಿದ ಪ್ರಕಾರವೇ ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆ ಮಾಡಲ್ಪಟ್ಟ ವರನ್ನಾಗಿಯೂ ನೀಚರನ್ನಾಗಿಯೂ ಮಾಡಿದ್ದೇನೆ.

10ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬನೇ ದೇವರು ಸೃಷ್ಟಿಸಿದನಲ್ಲವೋ? ಯಾಕೆ ಪ್ರತಿ ಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಿಂದ ನಡೆದು ನಮ್ಮ ತಂದೆಗಳ ಒಡಂಬಡಿಕೆ ಯನ್ನು ಅಪವಿತ್ರ ಮಾಡುತ್ತೇವೆ?

11ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ; ಇಸ್ರಾಯೇಲಿನ ಲ್ಲಿಯೂ ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ. ಕರ್ತನು ಪ್ರೀತಿ ಮಾಡಿದ ಪರಿಶುದ್ಧವಾ ದದ್ದನ್ನು ಯೆಹೂದವು ಅಪವಿತ್ರಮಾಡಿ ಅನ್ಯ ದೇವರ ಮಗಳನ್ನು ಮದುವೆ ಮಾಡಿಕೊಂಡಿದೆ.

ಮಲಾಕಿಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी