ಕುದುರೇ ದಂಡಿನವರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನಾನು ಕೇಳಿದೆನು.
14ಅದು ತುತೂರಿಯನ್ನು ಹಿಡಿದಿದ್ದ ಆರನೆಯ ದೂತನಿಗೆ--ಯೂಫ್ರೇಟೀಸ್ ಮಹಾ ನದಿಯಲ್ಲಿ ಬಂಧಿಸಲ್ಪಟ್ಟಿರುವ ನಾಲ್ಕು ಮಂದಿ ದೂತರನ್ನು ಬಿಚ್ಚಿಬಿಡು ಎಂದು ಹೇಳಿತು.
15ಆಗ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರ ಮಾಡುವ ತಾಸು, ದಿನ, ತಿಂಗಳು ಮತ್ತು ವರುಷಕ್ಕೆ ಸಿದ್ಧವಾಗಿದ್ದ ಆ ನಾಲ್ಕು ದೂತರನ್ನು ಬಿಚ್ಚಿದನು.
16ಕುದುರೇ ದಂಡಿನವರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನಾನು ಕೇಳಿದೆನು.
17ನಾನು ದರ್ಶನದಲ್ಲಿ ಕುದುರೆಗಳನ್ನು ಕಂಡೆನು, ಅವುಗಳ ಮೇಲೆ ಕೂತಿದ್ದವರು ಬೆಂಕಿಯ ನೀಲಿಯ ಮತ್ತು ಗಂಧಕದ ಕವಚಗಳನ್ನು ಧರಿಸಿದ್ದರು; ಆ ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು; ಅವುಗಳ ಬಾಯೊಳಗಿಂದ ಬೆಂಕಿ ಹೊಗೆ ಗಂಧಕ ಇವುಗಳು ಹೊರಡುತ್ತಿದ್ದವು.
18ಅವುಗಳ ಬಾಯಿಂದ ಹೊರಟ ಆ ಬೆಂಕಿ ಹೊಗೆ ಗಂಧಕ ಈ ಮೂರರಿಂದ ಮನುಷ್ಯರಲ್ಲಿ ಮೂರನೇ ಭಾಗವು ಹತವಾಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ