ಮತ್ತಾಯನು 21:3

ಮತ್ತು ಯಾವನಾದರೂ ನಿಮಗೆ ಏನಾದರೂ ಹೇಳಿದರೆ ನೀವು ಅವನಿಗೆ--ಅವು ಕರ್ತನಿಗೆ ಬೇಕಾಗಿವೆ ಎಂದು ಹೇಳಿರಿ; ಆಗ ಅವನು ಅವುಗಳನ್ನು ಕೂಡಲೆ ಕಳುಹಿಸುವನು ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 21

1ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ--

2ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ; ಆಗ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಲ್ಪಟ್ಟಿರುವದನ್ನು ನೀವು ತಕ್ಷಣವೇ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ.

3ಮತ್ತು ಯಾವನಾದರೂ ನಿಮಗೆ ಏನಾದರೂ ಹೇಳಿದರೆ ನೀವು ಅವನಿಗೆ--ಅವು ಕರ್ತನಿಗೆ ಬೇಕಾಗಿವೆ ಎಂದು ಹೇಳಿರಿ; ಆಗ ಅವನು ಅವುಗಳನ್ನು ಕೂಡಲೆ ಕಳುಹಿಸುವನು ಎಂದು ಹೇಳಿದನು.

4ಇದೆಲ್ಲವೂ ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರು ವಂತೆ ಆಯಿತು; ಅದೇನಂದರೆ--

5ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್‌ ಕುಮಾರ್ತೆಗೆ ಹೇಳಿರಿ ಎಂಬದೇ.

ಮತ್ತಾಯನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी